Advertisement

ಪ್ರಾದೇಶಿಕ ಪಕ್ಷಕ್ಕೆ ನೆಲೆ ಇಲ್ಲ,ರಾಜ್ಯದಲ್ಲಿ ಕೈಗೆ ಭವಿಷ್ಯವಿಲ್ಲ;BSY

12:27 PM Mar 11, 2017 | Team Udayavani |

ಬೆಂಗಳೂರು: ಉತ್ತರಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಬಿರುಗಾಳಿಗೆ ಕಾಂಗ್ರೆಸ್ ತತ್ತರಿಸಿ ಹೋಗಿದೆ. ಕರ್ನಾಟಕದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೂಡಾ ಮುಂದಿನ ಚುನಾವಣೆಯಲ್ಲಿ ಬಿಸಿ ತಟ್ಟಲಿದ್ದು, ಬಿಜೆಪಿ 150 ಸ್ಥಾನ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

Advertisement

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕುರಿತಂತೆ ಖಾಸಗಿ ಟಿವಿ ಚಾನೆಲ್ ಗೆ ನೀಡಿದ್ದ ಪ್ರತಿಕ್ರಿಯೆಯಲ್ಲಿ, ಬಿಜೆಪಿಗೆ ನಿರೀಕ್ಷೆಗೂ ಮೀರಿ ಜಯ ಸಿಕ್ಕಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಹೋರಾಟ ತೀವ್ರಗೊಳ್ಳಲಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಉತ್ತರಪ್ರದೇಶ, ಉತ್ತರಾಖಂಡ್ ಫಲಿತಾಂಶ ಸಿದ್ದರಾಮಯ್ಯಗೆ ಉತ್ತರವಾಗಿದೆ ಎಂದು ತಿಳಿಸಿದರು.

ಪ್ರಾದೇಶಿಕ ಪಕ್ಷಗಳಿಗೆ ಈ ದೇಶದಲ್ಲಿ ಅವಕಾಶ ಇಲ್ಲ ಎಂದು ಪರೋಕ್ಷವಾಗಿ ಜೆಡಿಎಸ್ ಗೆ ಟಾಂಗ್ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನ್ನನುಭವಿಸಲಿದೆ ಎಂದು ಬಿಎಸ್ ವೈ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next