Advertisement

ವಿಧಾನಸಭೆ ಚುನಾವಣೆ: ಅಧಿವೇಶನದ ಬಳಿಕ ಬಿಜೆಪಿ ರಾಜ್ಯ ಪ್ರವಾಸ

09:40 PM Sep 04, 2022 | Team Udayavani |

ಬೆಂಗಳೂರು ವಿಧಾನಸಭೆ ಚುನಾವಣೆಗೆ ಪೂರಕವಾಗಿ ರಾಜ್ಯ ಪ್ರವಾಸಗಳನ್ನು ಕೈಗೊಳ್ಳುವ ಬಗ್ಗೆ ರವಿವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಪ್ರಮುಖ ನಾಯಕರ ಸಭೆಯಲ್ಲಿ ನಿರ್ಧರಿಸಲಾಗಿದೆ.

Advertisement

ಸೆ.23ರ ವರೆಗೆ ನಡೆಯುವ ರಾಜ್ಯ ವಿಧಾನಮಂಡಲದ ಅಧಿವೇಶನದ ಬಳಿಕ ರಾಜ್ಯ ಪ್ರವಾಸ ಆರಂಭಿಸಲು ತೀರ್ಮಾನಿಸಲಾಯಿತು ಎಂದು ತಿಳಿದು ಬಂದಿದೆ. ಈಗಾಗಲೇ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ನಳಿನ್‌ ನೇತೃತ್ವದಲ್ಲಿ ತಲಾ 50 ಕ್ಷೇತ್ರಗಳಲ್ಲಿ ಪ್ರವಾಸ ಮಾಡುವ ಕುರಿತು ನಿರ್ಧರಿಸಲಾಗಿತ್ತು.

ಈಗ ಮಾಜಿ ಸಿಎಂ ಯಡಿಯೂರಪ್ಪ ಅವರು ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕಗೊಂಡ ಬಳಿಕ ಪ್ರವಾಸದ ತಂಡಗಳನ್ನು ರಚಿಸುವ ಬಗ್ಗೆ ಪಕ್ಷದ ಮಟ್ಟದಲ್ಲಿ ಗೊಂದಲ ಉಂಟಾಗಿದೆ ಎನ್ನಲಾಗಿದ್ದು, ಮತ್ತೆ ಇನ್ನೆರಡು ತಂಡಗಳ ರಚನೆ ಸಾಧ್ಯತೆಯೂ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next