ಬಂಟ್ವಾಳ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆದ ಕಾಂಗ್ರೆಸ್ ಪಕ್ಷದ ಸಾಧನೆಗೆ ಹಿರಿಯ ಕಾಂಗ್ರೆಸ್ ಮುಂದಾಳು, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಜನತೆ ಬದಲಾವಣೆ ಬಯಸಿದ್ದು, ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆ, ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯ ಗ್ಯಾರಂಟಿ ಕಾರ್ಡ್‌ನ್ನು ಜನ ಬಹಳಷ್ಟು ಮೆಚ್ಚಿಕೊಂಡಿದ್ದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ,ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್ ಹಾಗೂ ಇತರ ನಾಯಕರ ನಿರಂತರ ಕಾರ್ಯದಿಂದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಮರಳುವಂತಾಗಿದೆ. ಪಕ್ಷದ ಸಾಧನೆಗೆ ಅವಿರತವಾಗಿ ಹಗಲಿರುಳು ದುಡಿದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಪೂಜಾರಿ ಅವರು ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.