Advertisement
ಪಟ್ಟಿ ಬಿಡುಗಡೆ ಸಂಬಂಧ ಅಮಿತ್ ಶಾ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಸಭೆ ನಡೆಯಬೇಕಿತ್ತಾದರೂ ಅವರು ಬರುವುದು ತಡವಾದ್ದರಿಂದ ಸಾಧ್ಯವಾಗಲಿಲ್ಲ. ಆದರೆ, ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಸಭೆ ನಡೆಸಿ ಪಟ್ಟಿ ಬಿಡುಗಡೆ ಬಗ್ಗೆ ಚರ್ಚಿಸಿದರು. ಎರಡು ಪಟ್ಟಿ ಬಿಡುಗಡೆಯಿಂದ ಉಂಟಾಗಿರುವ ಬಂಡಾಯ, ಬಿಜೆಪಿ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿರುವ ನಾಯಕರು, ಕಾಂಗ್ರೆಸ್ ಪಕ್ಷದಲ್ಲಿ ಉದ್ಭವಿಸಿರುವ ಅಸಮಾಧಾನದ ಬಗ್ಗೆ ಸಮಾಲೋಚನೆ ನಡೆದಿದ್ದು ಮೂರನೇ ಪಟ್ಟಿ ಅಳೆದೂ -ತೂಗಿ ರಾಜಕೀಯ ಲೆಕ್ಕಾಚಾರದೊಂದಿಗೆ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
– ಬಿ.ಎಸ್.ಯಡಿಯೂರಪ್ಪ