Advertisement
ಜು.7ರಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ರಾಜಸ್ಥಾನ ಸೇರಿದಂತೆ ಉತ್ತರ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಲು ಸಭೆ ನಡೆಸಲಿದೆ. ಜು.8ರಂದು ಹೈದರಾಬಾದ್‌ನಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು, ಗೋವಾ, ಮಹಾರಾಷ್ಟ್ರ, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪಗಳಲ್ಲಿನ ಸಿದ್ಧತೆಯ ಬಗ್ಗೆ ಚುನಾವಣಾ ಸಿದ್ಧತೆಗಳ ಬಗ್ಗೆ ಪರಾಮರ್ಶೆ ನಡೆಯಲಿದೆ.
ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಶಿರೋಮಣಿ ಅಕಾಲಿ ದಳ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಜೆಡಿಯು ದೂರವಾದ ಬಳಿಕ ರಾಷ್ಟ್ರೀಯ ಲೋಕತಾಂತ್ರಿಕ ಜನತಾ ಪಾರ್ಟಿಯ ಪಶುಪತಿ ಕುಮಾರ್ ಪರಸ್, ಅಪ್ನಾ ದಳದ ಸುಪ್ರಿಯಾ ಸುಳೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಮದಾಸ್ ಅಠಾವಳೆ ಮಾತ್ರ ಈಗ ಸಚಿವರಾಗಿ ಉಳಿದಿದ್ದಾರೆ. ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಈಗ ಎನ್‌ಡಿಎ ಭಾಗವೇ ಆಗಿದೆ. ಬಿಹಾರ ಹಾಗೂ ಇತರ ರಾಜ್ಯಗಳಲ್ಲಿರುವ ಸಣ್ಣ ಪಕ್ಷಗಳನ್ನು ಮೈತ್ರಿಕೂಟಕ್ಕೆ ಸೇರಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಈ ಮೂಲಕ ಪ್ರತಿಪಕ್ಷಗಳು ಸ್ಥಾಪಿಸಲು ಉದ್ದೇಶಿಸಿದ್ದ ಮಹಾಮೈತ್ರಿಕೂಟಕ್ಕೆ ತಿರುಗೇಟು ನೀಡಲು ಬಿಜೆಪಿ ಮುಂದಾಗಿದೆ.