Advertisement

Assembly: ರಾಜ್ಯದ 1,351 ಗ್ರಾಮಗಳಲ್ಲಿ ಭೂಕುಸಿತ ಆತಂಕ; ಭೂ ಸರ್ವೆಕ್ಷಣ ಇಲಾಖೆ ವರದಿ

11:48 PM Jul 23, 2024 | Team Udayavani |

ಬೆಂಗಳೂರು: ಪಶ್ಚಿಮಘಟ್ಟ ವ್ಯಾಪ್ತಿಯ 250 ಗ್ರಾಮ ಪಂಚಾಯತ್‌ಗಳ 1,351 ಗ್ರಾಮಗಳ ಸೂಕ್ಷ್ಮ ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆಯಿದೆ ಎಂದು ಕೇಂದ್ರದ ಭೂ ಸರ್ವೆಕ್ಷಣ ಇಲಾಖೆ ವರದಿ ನೀಡಿದ್ದು, ಮುಂಜಾಗ್ರತ ಕ್ರಮವಾಗಿ ಕುಸಿತ ಉಂಟಾಗುವ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ ಸೇರಿದಂತೆ ಅಗತ್ಯ ಪರಿಹಾರ ಕಾರ್ಯಾಚರಣೆಗಾಗಿ 100 ಕೋಟಿ ರೂ. ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

Advertisement

ಪಶ್ಚಿಮಘಟ್ಟ, ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಭೂ ಕುಸಿತಕ್ಕೆ ಕಾರಣವೇನು ? ಹಾಗೂ ಕೈಗೊಳ್ಳಬೇಕಾದ ಸುರಕ್ಷಾ ಕ್ರಮ, ರಸ್ತೆ ಅಭಿವೃದ್ದಿಗೆ ವಿಶೇಷ ಪ್ಯಾಕೇಜ್‌ ನಿಗದಿ ಮಾಡಬೇಕೆಂದು ಸಿ.ಟಿ. ರವಿ, ಭಾರತಿ ಶೆಟ್ಟಿ, ಪ್ರತಾಪ್‌ಸಿಂಹ ನಾಯಕ್‌, ಭೋಜೇಗೌಡ ಮುಂತಾದವರು ಸರಕಾರದ ಗಮನ ಸೆಳೆದರು.

ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು, 2018ರಿಂದ ರಾಜ್ಯದಲ್ಲಿ ಭೂಕುಸಿತವಾಗುತ್ತಿದೆ. ಇದಕ್ಕೆ ಏನು ಕಾರಣ ಎಂಬುದರ ಬಗ್ಗೆ ಭೂ ವೈಜ್ಞಾನಿಕ ಸರ್ವೇಕ್ಷಣ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಅಧ್ಯಯನ ನಡೆಸಿವೆ. ಮಳೆಗಾಲದಲ್ಲಿ ವಾಡಿಕೆಯಂತೆ 60 ದಿನಗಳು ಮಳೆಯಾಗುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಎರಡು ತಿಂಗಳಲ್ಲಿ ಬೀಳುವ ಮಳೆ ಒಂದೇ ತಿಂಗಳಲ್ಲಿ ಬೀಳುತ್ತಿದೆ ಇದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.

ನೈಸರ್ಗಿಕ ಇಳಿಜಾರನ್ನು ತಗ್ಗಿಸಿ ರಸ್ತೆ ನಿರ್ಮಿಸಲಾಗುತ್ತಿದೆ. ನದಿಗಳ ನೈಸರ್ಗಿಕ ಹರಿವಿಗೆ ತಡೆ ಉಂಟಾಗುತ್ತಿದೆ. ಮಲೆನಾಡು ಭಾಗದಲ್ಲಿ ಕಾಫಿ ಎಸ್ಟೇಟ್‌ನಲ್ಲಿ ಪ್ಲ್ಯಾಟ್‌ ಪ್ಲಾಂಟ್‌ ಹಾಗೂ ಬಡಾವಣೆ ನಿರ್ಮಾಣ ಹೆಚ್ಚಾಗುತ್ತಿವೆ. ಸೂಕ್ಷ್ಮತೆ ಇಲ್ಲದೆ, ವೈಜ್ಞಾನಿಕ ಅಧ್ಯಯನವಿಲ್ಲದ ಪರಿಣಾಮ ಭೂಕುಸಿತಕ್ಕೆ ಕಾರಣವಾಗುತ್ತಿವೆ ಎಂದರು.

ಭವಿಷ್ಯದಲ್ಲಿ ಭೂಕುಸಿತ ತಡೆಯಲು ಕೇಂದ್ರದ ಭೂಸರ್ವೇಕ್ಷಣೆ ಇಲಾಖೆಯಿಂದ ವರದಿ ತರಿಸಿಕೊಳ್ಳಲಾಗಿದೆ. ಭೂ ಕುಸಿತದ ಅಪಾಯ ಹೆಚ್ಚಿರುವ ಕಡೆಗಳಲ್ಲಿ ಆದ್ಯತೆ ಮೇರೆಗೆ ಕುಸಿತ ತಡೆಯಲು 100 ಕೋಟಿ ರೂ. ಅನುದಾನ ನೀಡಲು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

Advertisement

ಶಿರಾಡಿ ಘಾಟಿಯಲ್ಲಿ ಇದೀಗ ಲೋಕೋಪಯೋಗಿ, ಜಿ.ಪಂ., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌, ಸಿಬಂದಿ ರಾತ್ರಿ ಗಸ್ತು ತಿರುಗುತ್ತಿದ್ದು ರಾತ್ರಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.


ರಸ್ತೆ ದುರಸ್ತಿಗೆ ಸೂಚನೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳು ಸೇರಿದಂತೆ ಮಳೆ ಬಾಧಿತ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯ ಈ ವಾರದಿಂದಲೇ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಬಿಜೆಪಿಯ ಡಾ| ಧನಂಜಯ ಸರ್ಜಿ ಅವರು ಶೂನ್ಯವೇಳೆಯಲ್ಲಿ ಪ್ರಸ್ತಾವಿಸಿ, ದ.ಕ., ಉಡುಪಿ ಸೇರಿದಂತೆ ಮಲೆನಾಡು ಪ್ರದೇಶ ನಿರಂತರ ಮಳೆಯಿಂದಾಗಿ ಮಳೆನಾಡು ಪ್ರದೇಶವಾಗಿ ಮಾರ್ಪಟ್ಟಿದೆ. ಗದ್ದೆ-ತೋಟ ಜಲಾವೃತ ಗೊಂಡಿವೆ. ಪರಿಸ್ಥಿತಿ ಹೀಗಿದ್ದರೂ ಸರಕಾರದ ಸಚಿವರು ಕಾಟಾಚಾರದ ಭೇಟಿ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next