Advertisement
ಚರ್ಚೆಯಲ್ಲಿ ಭಾಗವಹಿಸಿದ ಮೂರೂ ಪಕ್ಷಗಳ ಸದಸ್ಯರು, ಈಗಿರುವ ವಿವಿಗಳ ಸಮಸ್ಯೆ ಬಗ್ಗೆ ಸದನದ ಗಮನ ಸೆಳೆದರು. ಕುಲಪತಿ ಹುದ್ದೆಗೆ 5ರಿಂದ 20 ಕೋಟಿ ರೂ. ಡೀಲ್ ನಡೆಯುತ್ತಿದೆ. ಅಯೋಗ್ಯರು ವಿವಿಗಳಿಗೆ ನೇಮಕ ವಾಗುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಈಶ್ವರ್ ಖಂಡ್ರೆ ಆರೋಪಿಸಿದರು.
Related Articles
ಮಂಗಳೂರು ವಿಶ್ವವಿದ್ಯಾನಿಲಯದ ಪರಿಸ್ಥಿತಿ ಬಗ್ಗೆ ವಿವರಿಸಿದ ವಿಪಕ್ಷ ಉಪ ನಾಯಕ ಯು.ಟಿ.ಖಾದರ್, ಅಲ್ಲಿ 500 ಮಂಜೂರಾತಿ ಹುದ್ದೆ ಇದ್ದರೆ 780 ಹೊರಗುತ್ತಿಗೆ ಹುದ್ದೆಗಳಿಗೆ ಅವರಿಗೆ ಇಷ್ಟ ಬಂದಂತೆ ವೇತನ ನಿಗದಿ ಮಾಡಲಾಗಿದೆ. ಅಲ್ಲಿನ ಸಿಂಡಿಕೇಟ್ ಸದಸ್ಯರು ಬೆಂಗಳೂರಿನ ಪಂಚತಾರಾ ಹೊಟೇಲ್‌ಗೆ ಬಂದು ಸಭೆ ಮಾಡುತ್ತಾರೆ. ಅವರಿಗೆ ವಿದ್ಯಾರ್ಥಿಗಳು, ಶಿಕ್ಷಣದ ಗುಣಮಟ್ಟ ಕ್ಕಿಂತ ಸಭೆ ಭತ್ತೆ ಹೆಚ್ಚಿಸಿಕೊಳ್ಳುವುದರಲ್ಲೇ ಆಸಕ್ತಿ ಎಂದು ದೂರಿದರು.
Advertisement
ಕಾಂಗೆಸ್‌ನ ಎಂ.ಬಿ.ಪಾಟೀಲ್ ಅವರು ಕರ್ನಾಟಕ ವಿಶ್ವವಿದ್ಯಾನಿಲಯ, ಮಹಿಳಾ ವಿಶ್ವವಿದ್ಯಾನಿಲಯದ ಪರಿಸ್ಥಿತಿ ವಿವರಿಸಿದರೆ, ಪರಮೇಶ್ವರ ನಾಯಕ್ ಕೃಷ್ಣದೇವರಾಯ ವಿವಿ ಸ್ಥಿತಿಗತಿ ಬಗ್ಗೆ ಸದನದ ಗಮನ ಸೆಳೆದರು. ಹಾಲಿ ಇರುವ ಎಂಜಿನಿಯರಿಂಗ್ ಕಾಲೇಜು ಮುಚ್ಚುತ್ತಿರುವ ಸ್ಥಿತಿ ಎದುರಾಗಿ ರುವ ಬಗ್ಗೆಯೂ ಸದನದಲ್ಲಿ ಪ್ರಸ್ತಾವವಾಯಿತು.
ಬಿಎಸ್‌ಪಿಯ ಮಹೇಶ್, ಬಿಜೆಪಿಯ ವೇದವ್ಯಾಸ ಕಾಮತ್, ಕಾಂಗ್ರೆಸ್‌ನ ದದ್ದಲ್ ಮತ್ತಿತರರು ಕೂಡ ವಿವಿಗಳಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳುಂತೆ ಆಗ್ರಹಿಸಿದರು.ಚರ್ಚೆ ಬಳಿಕ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿದ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ಅವರು, ಮಸೂದೆಗೆ ಅನುಮೋದನೆ ಪಡೆದುಕೊಂಡರು.
ನೇಮಕಾತಿ ಹೊಣೆಗಾರಿಕೆ ಕೊಡಬಾರದುವಿವಿಗಳಿಗೆ ನೇಮಕಾತಿ ಹಾಗೂ ನಿರ್ಮಾಣದ ಹೊಣೆ ನೀಡಬಾರದು. ಅದರಿಂದಲೇ ಹೆಚ್ಚು ಅಕ್ರಮಗಳು ನಡೆಯುತ್ತಿವೆ. ಅದಕ್ಕಾಗಿಯೇ ಕುಲಪತಿ, ರಿಜಿಸ್ಟ್ರಾರ್ ಆಗಲು ಪೈಪೋಟಿ ಹಾಗೂ ಲಾಬಿ ನಡೆಯುತ್ತದೆ ಎಂದು ಬಿಜೆಪಿಯ ಅರವಿಂದ ಬೆಲ್ಲದ ಹೇಳಿದರು. ಸಂಗೀತ, ಜಾನಪದ ಹೀಗೆ ಕಲೆ, ಸಂಸ್ಕೃತಿಗೆ ಸಂಬಂಧಿಸಿದ ವಿಮಿಗಳನ್ನು ಒಂದುಗೂಡಿಸಿ ಎಂದು ಸಲಹೆ ನೀಡಿದರು. ಇತ್ತೀಚೆಗೆ ನಾನು ಕೆನಡಾಕ್ಕೆ ಹೋಗಿದ್ದಾಗ ನಮ್ಮ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಅಲ್ಲಿ ಕಲಿಯುತ್ತಿರುವುದು ತಿಳಿಯಿತು. ಹಾಗಾದರೆ ನಮ್ಮ ವಿವಿಗಳಲ್ಲಿ ಕೊಡದ ಶಿಕ್ಷಣ ಅಲ್ಲಿ ಕೊಡುತ್ತಿದ್ದಾರಾ? ಇಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲವೇ? ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿ, ವಿವಿಗಳ ಸ್ಥಿತಿ ಸುಧಾರಿಸಲು ಕ್ರಮ ಕೈಗೊಳ್ಳಬೇಕು.
– ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್