Advertisement
ಜಿಎಸ್‌ಟಿ, ಕಡ್ಡಾಯ ಗ್ರಾಮೀಣ ವೈದ್ಯ ಸೇವೆ, ಗ್ರಾಮ ಸ್ವರಾಜ್, ಮುದ್ರಾಂಕ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಒಪ್ಪಿಗೆ ದೊರೆತಿದೆ. ವಿಧೇಯಕದ ಚರ್ಚೆಯಲ್ಲಿ ಭಾಗವಹಿಸುವಂತೆ ಸ್ಪೀಕರ್ ಯು.ಟಿ.ಖಾದರ್ ಮಾಡಿದ ಮನವಿಗೆ ಬಿಜೆಪಿ ಹಾಗೂ ಜೆಡಿಎಸ್ ಸ್ಪಂದಿಸದ ಕಾರಣಕ್ಕೆ ಗದ್ದಲದ ನಡುವೆಯೇ ವಿಧೇಯಕಗಳನ್ನು ಪಾಸು ಮಾಡಿಕೊಳ್ಳಲಾಗಿದೆ.
Related Articles
ಸಾಲದ ಕರಾರು ಪತ್ರ, ಅಡಮಾನ, ದತ್ತು, ಹಸ್ತಾಂತರ ಪ್ರಮಾಣಪತ್ರ, ಒಪ್ಪಂದ ಪತ್ರ ಸೇರಿ 54 ನೋಂದಣಿಯೇತರ ದಾಖಲೆಗಳ ಮೇಲಿನ ಮುದ್ರಾಂಕ ಶುಲ್ಕವನ್ನು ಕನಿಷ್ಠ ಎರಡರಿಂದ ನಾಲ್ಕು ಪಟ್ಟು ಹೆಚ್ಚಿಸಲು ಅನುಕೂಲವಾಗುವಂತೆ ಮುದ್ರಾಂಕ ಕಾಯಿದೆಗೆ ತಿದ್ದುಪಡಿ ತರಲಾಗಿದೆ.
Advertisement
ಪರ್ಯಾಲೋಚನೆ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ನೋಂದಣಿ ಶುಲ್ಕ ಪರಿಷ್ಕರಣೆ ಮಾಡಲಾಗಿದೆ ಎಂಬ ತಪ್ಪು ಅಭಿಪ್ರಾಯ ರವಾನೆಯಾಗಿದೆ. ಆದರೆ ಇದು ನೋಂದಣಿಯೇತರ ಮುದ್ರಾಂಕ ಶುಲ್ಕ ಪರಿಷ್ಕರಣೆ ಮಾತ್ರವಾಗಿದೆ. ಬ್ರಿಟಿಷ್ ಕಾಲದಿಂದಲೂ ಈ ಶುಲ್ಕ ವಿಧಿಸಲಾಗುತ್ತಿದೆ. 1994ರ ಬಳಿಕ ಇದುವರೆಗೆ ಪರಿಷ್ಕರಣೆಯಾಗಿಲ್ಲ, 5, 10, 20 ರೂ.ನಷ್ಟಿದ್ದ ಶುಲ್ಕವನ್ನು ಈಗ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಿ ಆದಾಯ ಸೋರಿಕೆ ತಡೆಗಟ್ಟುತ್ತಿದ್ದೇವೆ. ಸುಮಾರು 54 ಸೇವೆಗಳಿಗೆ ಇದು ಅನ್ವಯವಾಗಲಿದೆ ಎಂದು ವಿವರಿಸಿದರು.ದತ್ತು ಪ್ರಮಾಣಪತ್ರದ ಮುದ್ರಾಂಕ ಶುಲ್ಕವು 500ರಿಂದ 1,000 ರೂ.ಗಳಿಗೆ ಹೆಚ್ಚಳವಾಗಲಿದೆ. ಅಫಿಡವಿಟ್‌ಗಳ ಶುಲ್ಕ 20ರಿಂದ 100 ರೂ.ಗಳಿಗೆ, 1 ಲಕ್ಷದವರೆಗಿನ ಚಿಟ್‌ಫಂಡ್ ಒಪ್ಪಂದದ ಮುದ್ರಾಂಕ ಶುಲ್ಕವನ್ನು 100ರಿಂದ 500 ರೂ.ಗಳಿಗೆ, 1 ಲಕ್ಷದವರೆಗಿನ ಸಾಲದ ಒಪ್ಪಂದದ ಮೇಲಿನ ಮುದ್ರಾಂಕ ಶುಲ್ಕವನ್ನು ಶೇ. 0.1ರಿಂದ ಶೇ 0.5ಕ್ಕೆ ಹೆಚ್ಚಿಸುವ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ. ಇನ್ನು ಕಂಪನಿ ಆರಂಭಕ್ಕೆ ಸಂಬಂಧಿಸಿದ ಪ್ರಮಾಣಪತ್ರಗಳಿಗೆ ಪ್ರಸ್ತುತ 10 ಲಕ್ಷದಿಂದ 50 ಲಕ್ಷದವರೆಗಿನ ಮೌಲ್ಯದ ಕಂಪನಿಗಳಿಗೆ ಪ್ರತಿ ಹತ್ತು ಲಕ್ಷಕ್ಕೆ 1,000 ರೂ. ಶುಲ್ಕವಿದೆ. ಇನ್ಮುಂದೆ ಅದನ್ನು ಪ್ರತಿ ಹತ್ತು ಲಕ್ಷದಿಂದ 1 ಕೋಟಿಯವರೆಗಿನ ಮೌಲ್ಯದ ಕಂಪನಿಗಳಿಗೆ ಪ್ರತಿ ಹತ್ತು ಲಕ್ಷಕ್ಕೆ 5,000 ರೂ. ಶುಲ್ಕ ವಿಧಿಸುವ ಪ್ರಸ್ತಾವ ಮಾಡಲಾಗಿದೆ. ವಿವಾಹ ವಿಚ್ಛೇದನ ಪ್ರಮಾಣಪತ್ರ, ವಿಭಾಗ ಪತ್ರ, ಬಾಂಡ್‌ಗಳು, ಗುತ್ತಿಗೆ ಒಪ್ಪಂದಗಳೂ ಈ ಮಸೂದೆ ವ್ಯಾಪ್ತಿಯಲ್ಲಿವೆ. ಕಂಪನಿ ಆರಂಭಕ್ಕೆ ಸಂಬಂಧಿಸಿದ ಒಪ್ಪಂದ, ಚಿಟ್ ಫಂಡ್ ಒಪ್ಪಂದಗಳು, ವಕೀಲರ ಅಫಿಡವಿಟ್‌ಗಳ ಮುದ್ರಾಂಕ ಶುಲ್ಕವನ್ನು ಹೆಚ್ಚಿಸಲಾಗುತ್ತದೆ.