Advertisement

ಮತ್ಸ್ಯಾಶ್ರಯ ಯೋಜನೆ: ಸ್ಪೀಕರ್‌ ಅಸಮಾಧಾನ

12:05 AM Mar 08, 2022 | Team Udayavani |

ಬೆಂಗಳೂರು: ಮತ್ಸ್ಯಾಶ್ರಯ ಯೋಜನೆ ಯಡಿ 2018-19ನೇ ಸಾಲಿನಲ್ಲಿ ಆಯ್ಕೆಯಾದ ಮೀನು ಗಾರರ ಮನೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

Advertisement

ಕಾಂಗ್ರೆಸ್‌ನ ಯು.ಟಿ. ಖಾದರ್‌ ಕೇಳಿದ ಪ್ರಶ್ನೆಗೆ ಸಚಿವ ಎಸ್‌. ಅಂಗಾರ ಪರವಾಗಿ ಸಚಿವೆ ಶಶಿಕಲಾ ಜೊಲ್ಲೆ ಉತ್ತರ ನೀಡಿದ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಕಾಗೇರಿ, ಫಲಾನುಭವಿಗಳನ್ನು ಆಯ್ಕೆ ಮಾಡಿ ವರ್ಷಗಳೇ ಕಳೆದರೂ ಮನೆ ಮಂಜೂರು ಮಾಡದಿರುವುದು ಸರಿಯಾದ ಕ್ರಮವಲ್ಲ.

ವಿಷಯ ಗಂಭೀರವಾಗಿ ಪರಿಗಣಿಸಿ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಸರಕಾರಕ್ಕೆ ತಾಕೀತು ಮಾಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next