Advertisement

ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆಗೆ ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಹಾಲಪ್ಪ ಆಚಾರ್‌

08:51 PM Sep 16, 2022 | Team Udayavani |

ವಿಧಾನಸಭೆ: ರಾಜ್ಯದ 1,002 ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಹಾಗೂ 2329 ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೇಮಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್‌ ತಿಳಿಸಿದರು.

Advertisement

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಪ್ರಶ್ನೆಗೆ ಉತ್ತರಿಸಿದ ಸಚಿವರು, 400ರಿಂದ 800 ಜನಸಂಖ್ಯೆ ಇರುವ 1,002 ಮಿನಿ ಅಂಗನವಾಡಿ ಕೇಂದ್ರಗಳನ್ನು ಆದ್ಯರ್ಪಿಸಿ 1,002 ಮುಖ್ಯ ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ 2022 ಏ.4 ಹಾಗೂ ಜು.17ರಂದು ಪ್ರಸ್ತಾವನೆ ಸಲ್ಲಿಸಲಾಗಿದೆ.

ಉಳಿದ 2,329 ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ಹುದ್ದೆಯನ್ನು ಮಂಜೂರು ಮಾಡಲು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ. ಕೇಂದ್ರದಿಂದ ಮಂಜೂರಾತಿ ದೊರೆತ ನಂತರ 1,002 ಮಿನಿ ಅಂಗನವಾಡಿ ಕೇಂದ್ರಗಳು ಮುಖ್ಯ ಅಂಗನವಾಡಿ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next