Advertisement

ಪ್ರವಾಹಕ್ಕೆ ಬೇಜವಾಬ್ದಾರಿತನವೇ ಕಾರಣ: ರಾಜ್ಯ ಸರಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ಧಾಳಿ

11:59 PM Sep 13, 2022 | Team Udayavani |

ಬೆಂಗಳೂರು: ರಾಜ್ಯ ಸರಕಾರ ಪ್ರವಾಹ ಪರಿಸ್ಥಿತಿ ಎದುರಿಸಲು ಮುಂಜಾಗ್ರತ ಕ್ರಮ ಕೈಗೊಳ್ಳದೇ ಇರುವುದಕ್ಕೆ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುವಂತಾಗಿದ್ದು, ಇದಕ್ಕೆ ರಾಜ್ಯ ಸರಕಾರದ ಬೇಜ ವಾಬ್ದಾರಿತನವೇ ಕಾರಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Advertisement

ರಾಜ್ಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಜನತೆ ಎದುರಿಸಿದ ಕಷ್ಟ ನಷ್ಟಗಳು ಹಾಗೂ ಜನರ ನೆರವಿಗೆ ಸಕಾಲದಲ್ಲಿ ಧಾವಿಸದ ಸರಕಾರದ ವೈಫ‌ಲ್ಯಗಳ ಕುರಿತು ನಿಲುವಳಿ ಸೂಚನೆ ಮೇಲೆ ಮಾತ ನಾಡಿದ ಅವರು, ರಾಜ್ಯ ಸರಕಾರವು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫ‌ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹವಾಮಾನ ತಜ್ಞರು ಮುಂದಿನ ದಿನಗಳಲ್ಲಿ ಹವಾಮಾನ ಬದಲಾವಣೆಯಿಂದ ರಾಜ್ಯ ಭೀಕರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂಬ ಮುನ್ನೆಚ್ಚರಿಕೆ ಕೊಟ್ಟಿದ್ದಾರೆ, ಸರಕಾರ ಕೂಡಲೇ ಈ ಪರಿಸ್ಥಿತಿಯನ್ನು ಎದುರಿಸಲು ಬೇಕಾದ ತಯಾರಿ ಮಾಡಿಕೊಳ್ಳಬೇಕು, ಇಲ್ಲದಿದ್ದರೆ ಮುಂದೆ ರಾಜ್ಯ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರಕಾರದ ಪ್ರಕಾರ ಒಟ್ಟು ಬೆಳೆ, ಮನೆ, ರಸ್ತೆ, ಸೇತುವೆ ಮುಂತಾದ ಎಲ್ಲವೂ ಸೇರಿ ರೂ. 7,647.13 ಕೋಟಿ ನಷ್ಟವಾಗಿದೆ ಎಂದು ಕೇಂದ್ರ ಸರಕಾರಕ್ಕೆ ಮನವಿ ನೀಡಿದೆ. ಎನ್‌ಡಿಆರ್‌ಎಫ್ ನಿಯಮಗಳ ಪ್ರಕಾರ 1,012 ಕೋಟಿ 50 ಲಕ್ಷ ಪರಿಹಾರದ ಹಣವನ್ನು ರಾಜ್ಯ ಸರಕಾರ ಕೇಳಿದೆ. ಈ ವರೆಗೆ 1 ಪೈಸೆ ಹಣ ಕೇಂದ್ರದಿಂದ ಬಂದಿಲ್ಲ ಎಂದು ಹೇಳಿದರು.

ಎನ್‌ಡಿಆರ್‌ಎಫ್ ಪರಿಷ್ಕರಣೆ: ನಿರ್ಣಯ
ಕಳೆದ ಏಳು ವರ್ಷಗಳಿಂದ ಎನ್‌ಡಿಆರ್‌ಎಫ್ ಪರಿಷ್ಕರಣೆಯಾಗಿಲ್ಲ. ಹೀಗಾಗಿ ಎನ್‌ಡಿಆರ್‌ಎಫ್ ನಿಯಮಗಳನ್ನು ಪರಿಷ್ಕರಣೆ ಮಾಡುವಂತೆ ನಿರ್ಣಯ ಕೈಗೊಂಡು ಕೇಂದ್ರ ಸರಕಾರಕ್ಕೆ ಕಳುಹಿಸೋಣ ಎಂದು ಸಿದ್ದರಾಮಯ್ಯ ಹೇಳಿದರು. 2015ರಲ್ಲಿ ಪರಿಷ್ಕರಣೆ ಮಾಡಲಾಗಿತ್ತು. ಇದಾಗಿ 5 ವರ್ಷಗಳು ಕಳೆದಿವೆ. 2020ರಲ್ಲಿ ಮತ್ತೆ ಪರಿಷ್ಕರಣೆ ಆಗಬೇಕಿತ್ತು. ಆದರೆ, ಕೇಂದ್ರ ಸರಕಾರ ಮಾಡಿಲ್ಲ. ಈ ಸದನದಲ್ಲಿ ನಾವು ಎನ್‌ಡಿಆರ್‌ಎಫ್ ನಿಯಮಗಳನ್ನು ಪರಿಷ್ಕರಣೆ ಮಾಡುವಂತೆ ನಿರ್ಣಯ ಕೈಗೊಂಡು ಕೇಂದ್ರ ಸರಕಾರಕ್ಕೆ ಕಳುಹಿಸಿ ಕೊಡೋಣ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next