Advertisement
ಮಸೂದೆ ಮೇಲೆ ಪರ್ಯಾಲೋಚಿಸಿ, 2021-22ನೇ ಸಾಲಿನ 10,265 ಕೋಟಿ ರೂ. ಗಳ ಪೂರಕ ಅಂದಾಜಿಗೆ ಒಪ್ಪಿಗೆ ನೀಡುವಂತೆ ಕೋರಲಾಯಿತು. ಇದರಲ್ಲಿ ಜೆಜೆಎಂ 1,000 ಕೋಟಿ ರೂ., ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ 1,000 ಕೋ. ರೂ., ಆರೋಗ್ಯಕ್ಕೆ 3,300 ಕೋಟಿ ರೂ. ವ್ಯಯಿಸಲು ತೀರ್ಮಾನಿಸಲಾಗಿದೆ ಎಂದು ವಿವರಿಸಲಾಯಿತು.
Related Articles
Advertisement
ರಾಜ್ಯದ ಸಾಲ ಜಿಡಿಪಿಯ ಶೇ. 25 ಮಿತಿಯಲ್ಲಿರಬೇಕು ಎಂದು ನಿಯಮ ಮಾಡಿಕೊಂಡಿದ್ದೇವೆ. ಆದರೆ, ಇದನ್ನು ಮೀರಿದ್ದೇವೆ. ಹೀಗಾಗಿ ಅದರ ಮಿತಿ ಮೀರದಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.
ಕೇಂದ್ರದಿಂದ 15,109 ಕೋಟಿ ರೂ. ಜಿಎಸ್‌ಟಿ ಪರಿಹಾರ
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಕೇಂದ್ರ 15,109 ಕೋಟಿ ರೂ. ಜಿಎಸ್‌ಟಿ ಪರಿಹಾರ ನೀಡುವುದಾಗಿ ಹೇಳಿದೆ. ಅದರಲ್ಲಿ 8,542 ಕೋಟಿ ರೂ. ಬಿಡುಗಡೆ ಮಾಡಿದೆ. ಇದೊಂದು ವಿಶೇಷವಾದ ಹಣಕಾಸು ಪರಿಸ್ಥಿತಿ ಇದೆ. ಈಗಿನ ಪರಿಸ್ಥಿತಿಯಲ್ಲಿ ಅನುತ್ಪಾದಕ ವೆಚ್ಚ ಕಡಿಮೆ ಮಾಡಲಾಗುವುದು. ವಿಜಯಭಾಸ್ಕರ್ ಸಮಿತಿ ವರದಿ ಆಧಾರದಲ್ಲಿ ಶೇ. 5ರಷ್ಟು ವೆಚ್ಚ ಕಡಿತ ಮಾಡಲು ಕ್ರಮ ಕೈಗೊಳ್ಳಲಾಗುವುದು. ಲೋಕೋಪಯೋಗಿ, ವಸತಿ ಇಲಾಖೆಯ ಬಾಕಿ ಹಣ ಹಾಗೂ ನೀರಾವರಿ ಯೋಜನೆಗಳಿಗೆ ಹಣ ಒದಗಿಸಲಾಗುವುದು ಎಂದರು.
ಜಿಎಸ್‌ಟಿಯಲ್ಲಿ ಹಣ ಕದಿಯುವ ಕೆಲಸವಾಗುತ್ತಿದ್ದು, ಅದರ ಬಗ್ಗೆ ತನಿಖೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಕೇಂದ್ರದಿಂದ ಶೇ. 14ರಷ್ಟು ಜಿಎಸ್‌ಟಿ ಪರಿಹಾರ ಬರಲಿದೆ. ಕೇಂದ್ರ ಸರಕಾರಕ್ಕೆ ರಾಜ್ಯದ ಪಾಲಿನ ಬಾಕಿ ಹಣ ಕೊಡುವಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಅಲ್ಲದೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಸುಸ್ಥಿತಿಯಲ್ಲಿಡುವ ಜವಾಬ್ದಾರಿ ಹೊಂದಿದ್ದೇನೆ ಎಂದು ಹೇಳಿದರು.
“ಡಯಾಲಿಸಿಸ್ ಕೇಂದ್ರ ಸುಸ್ಥಿತಿಗೆ ಶೀಘ್ರ ಕ್ರಮ’ :
ಬೆಂಗಳೂರು: ತಾಲೂಕು ಕೇಂದ್ರಗಳ ಡಯಾಲಿಸಿಸ್ ಕೇಂದ್ರಗಳಲ್ಲಿ ಸಮರ್ಪಕ ಸೇವೆ ಸಿಗುತ್ತಿಲ್ಲ. ಅಗತ್ಯ ಸಲಕರಣೆ ಇಲ್ಲ, ಅಲ್ಲಿ ಕೆಲಸ ಮಾಡುವವರಿಗೆ ವೇತನವೂ ಸಿಗುತ್ತಿಲ್ಲ ಎಂಬ ವಿಚಾರವು ಸ್ಪೀಕರ್ ಸಹಿತ ಪಕ್ಷಾತೀತವಾಗಿ ಪ್ರಸ್ತಾವವಾಯಿತು.
ಸರಕಾರವು ಪ್ರತಿ ಡಯಾಲಿಸಿಸ್‌ಗೆ 1,155 ರೂ. ವೆಚ್ಚ ಮಾಡುತ್ತಿದೆ. ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆ ವಹಿಸಿದ್ದ ಎರಡು ಕಂಪೆನಿಗಳಲ್ಲಿ ಬಿ.ಆರ್.ಶೆಟ್ಟಿಗೆ ಸೇರಿದ ಸಂಸ್ಥೆ ಆರ್ಥಿಕ ಸಂಕಷ್ಟದಲ್ಲಿದೆ. ಹೀಗಾಗಿ, ಸರಕಾರ ಪರ್ಯಾಯ ಕ್ರಮಗಳ ಬಗ್ಗೆ ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಆದಷ್ಟು ಶೀಘ್ರದಲ್ಲಿ ಉತ್ತಮ ಸೇವೆ ಪಡೆಯುವ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ಭರವಸೆ ನೀಡಿದರು.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೂಡ, ಈ ಬಗ್ಗೆ ಸರಕಾರ ಅಗತ್ಯ ಗಮನಹರಿಸಬೇಕು ಎಂದು ಸೂಚಿಸಿದರು. ಬಿಜೆಪಿಯ ಡಿ.ಎಸ್. ಸುರೇಶ್, ಕಾಂಗ್ರೆಸ್‌ನ ಮಹಾಂತೇಶ್ ಕೌಜಲಗಿ, ಅಮರೇಗೌಡ ಬಯ್ನಾಪುರ, ಶಿವಾನಂದ ಪಾಟೀಲ್ ಪ್ರಮುಖವಾಗಿ ಚರ್ಚೆಯಲ್ಲಿ ಪಾಲ್ಗೊಂಡರು.
ಡಯಾಲಿಸಿಸ್ ಕೇಂದ್ರಗಳ ಸಮಸ್ಯೆ ನಮ್ಮ ಗಮನದಲ್ಲಿದೆ. ಇದೇ ಕಾರಣಕ್ಕೆ ಆಗಸ್ಟ್‌ನಿಂದ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಅಲ್ಲಿನ ಸಿಬಂದಿಗೆ ವೇತನವನ್ನು ನೇರವಾಗಿ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದೂ ಡಾ| ಸುಧಾಕರ್ ಹೇಳಿದರು.
ಮೇಲ್ದರ್ಜೆಗೆ ಕ್ರಮ:
ಬಿಜೆಪಿಯ ದೊಡ್ಡನಗೌಡ ಪಾಟೀಲ್ ಅವರ ಮತ್ತೂಂದು ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವರು, 250 ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವ ಸರಕಾರದ ಮುಂದಿದ್ದು, ಪ್ರತಿ ತಾಲೂಕಿನ ಒಂದಾದರೂ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಸಕಲ ಸೌಲಭ್ಯ ಸಹಿತ ಮೇಲ್ದರ್ಜೆಗೇರಲಿದೆ ಎಂದರು.