ಬೆಳ್ತಂಗಡಿ: ರಾಜ್ಯಾದ್ಯಂತ ಶಾಲಾ ಶಿಕ್ಷಕರ ಕೊರತೆ ಯನ್ನು ಗಮನಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸೂಚನೆ ಯಂತೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 750 ಶಾಲೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗೌರವ ಶಿಕ್ಷಕರನ್ನು ನಿಯೋಜಿಸಲಾಗಿದೆ. ಈ ಪೈಕಿ 231 ಶಾಲೆ ಗಳು ಏಕೋಪಾಧ್ಯಾಯ ಶಾಲೆ ಗಳಾಗಿವೆ ಎಂದು ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥ್ ತಿಳಿಸಿದ್ದಾರೆ.
ಗ್ರಾಮೀಣ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಬಹಳಷ್ಟು ಮಹತ್ವದ್ದಾ ಗಿದ್ದು, ಗ್ರಾಮೀಣ ಹಾಗೂ ಪಟ್ಟಣ ಪ್ರದೇಶ ಗಳಲ್ಲಿ ಈಗಲೂ ಶಿಕ್ಷಣದ ಬಹ ಳಷ್ಟು ಅಸಮಾನತೆ ಕಾಣುತ್ತೇವೆ. ಹಲವು ಜಿಲ್ಲೆಗಳು ಇನ್ನೂ ಶೈಕ್ಷಣಿಕ ವಾಗಿ ಹಿಂದುಳಿದಿವೆ. ಸರಕಾರಗಳು ಹಲವಾರು ಕಾರ್ಯಕ್ರಮ ಗಳನ್ನು ಜಾರಿಗೆ ತಂದರೂ ಅದನ್ನು ಸಂಪೂರ್ಣ ವಾಗಿ ನೀಗಿಸಲು ಸಾಧ್ಯವಾಗದಿರುವ ಕಾರಣ ಡಾ| ಹೆಗ್ಗಡೆಯವರು ಯೋಜ ನೆಯ ಮೂಲಕ ಸರಕಾರಿ ಶಾಲೆಗಳ ಮೂಲಸೌಕರ್ಯ ಸುಧಾ ರಣೆಗಾಗಿಯೇ 30 ವರ್ಷಗಳ ಹಿಂದೆ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮ ಜಾರಿಗೆ ತಂದರು.
43.81 ಕೋ.ರೂ. ಪೂರಕ ಸಹಾಯಧನ :
ಜ್ಞಾನದೀಪ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮಟ್ಟ ಸುಧಾರಣೆ ಮತ್ತು ಕಲಿಕಾ ವಾತಾವರಣ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಮೂಲ ಸೌಕರ್ಯ ಗಳಿಗಾಗಿ ಇದು ವರೆಗೆ 43.81 ಕೋ.ರೂ.ಗಳ ಮೊತ್ತದ ಪೂರಕ ಸಹಾಯಧನ ನೀಡಲಾಗಿದೆ.
ಶಾಲೆಗಳಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಂಖ್ಯೆಯ ಅನುಪಾತ ವನ್ನು ಗಮನಿಸಿ ತೀರಾ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಜ್ಞಾನ ದೀಪ ಶಿಕ್ಷಕರ ನಿಯೋಜನೆ ಮಾಡ ಲಾಗುತ್ತಿದೆ. ಈ ಶಿಕ್ಷಕರ ಸೇವೆಯು ಗ್ರಾಮೀಣ ಶಾಲಾ ಮಕ್ಕಳು ಪಾಠ ಪ್ರವಚನದಿಂದ ವಂಚಿತರಾಗುವು ದನ್ನು ತಡೆಗಟ್ಟಲು ಸಂಸ್ಥೆಯ ವತಿ ಯಿಂದ ರೂಪಿಸಿದ ತಾತ್ಕಾಲಿಕ ವ್ಯವಸ್ಥೆ ಯಾಗಿದೆ. ಈ ಶಿಕ್ಷಕರಿಗೆ ಮಾಸಿಕ ಗೌರವಧನವನ್ನು ಸಂಸ್ಥೆಯ ವತಿಯಿಂದ ಪಾವತಿಸಲಾಗುತ್ತಿದ್ದು, ಇದಕ್ಕಾಗಿಯೇ ಇದುವರೆಗೆ 11.05 ಕೋ.ರೂ. ವಿನಿಯೋಗಿಸಲಾಗಿದೆ.
ಜ್ಞಾನದೀಪ ಶಿಕ್ಷಕರ ಮೂಲಕ :
ಶಾಲೆ ಬಿಟ್ಟ 6ರಿಂದ 14 ವರ್ಷ ಪ್ರಾಯದ ಮಕ್ಕಳ ಮನೆಗೆ ತೆರಳಿ ಕಾರಣ ತಿಳಿಯುವುದು ಹಾಗೂ ಮತ್ತೆ ಶಾಲೆಗೆ ಸೇರ್ಪಡೆಗೊಳಿ ಸುವುದು ಹಾಗೂ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಶ್ರಮಿಸಲಾಗುತ್ತಿದೆ ಎಂದು ಡಾ| ಮಂಜುನಾಥ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.