ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪಸರಿಸಲು ಅನೇಕ ಯೋಜನೆಗಳನ್ನು ರೂಪಿಸಿದ್ದು, ಅದನ್ನು ಅನುಷ್ಠಾನಗೊಳಿಸಲು ಸಹಕರಿಸಬೇಕು ಎಂದು ಪ್ರೊ.ಕೋಡಿ ರಂಗಪ್ಪ ಮನವಿ ಮಾಡಿದರು.
ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಮಾನ ಮನಸ್ಕರ ಸಭೆಯಲ್ಲಿ ಮಾತನಾಡಿ, ಸಾಹಿತ್ಯದಿಂದ ತಾವು ಜೀವನದಲ್ಲಿಅನೇಕ ಪಾಠಗಳನ್ನು ಕಲಿತಿದ್ದೇವೆ. ಗಡಿ ಜಿಲ್ಲೆಯಲ್ಲಿಕನ್ನಡಪರ ವಾತಾವರಣ ನಿರ್ಮಿಸಲು ಎಲ್ಲರು ಕೈಜೋಡಿಸಬೇಕು ಎಂದರು.
ಸಾಹಿತ್ಯದಿಂದ ಬದಲಾವಣೆ ಸಾಧ್ಯ: ಉತ್ತಮ ಸಾಹಿತ್ಯ ಎಲ್ಲಾ ಕ್ಷೇತ್ರಗಳಿಗೂ ಬೇಕಾಗಿದೆ. ಸಾಹಿತ್ಯ ದಿಂದ ಸಾಮಾ ಜಿಕ ಬದಲಾವಣೆ ಸಾಧ್ಯ. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ತಾಲೂಕಿನ ಎಲ್ಲಾ ಕಸಾಪ ಸದಸ್ಯರ ಬೆಂಬಲಅಪೇಕ್ಷಿಸುವುದಾಗಿ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತನ್ನು ಗ್ರಾಮಾಂತರ ಪ್ರದೇಶ ಗಳಲ್ಲಿ ಹಬ್ಬಿಸಲು ಹೋಬಳಿ ಮಟ್ಟದಲ್ಲಿ ಕಸಾಪ ಸಮಿತಿ ಗಳನ್ನು ರಚಿಸುವುದು. ಜಿಲ್ಲಾ ಮತ್ತು ತಾಲೂಕುಕೇಂದ್ರದಲ್ಲಿ ಸಾಹಿತ್ಯ ಪರಿಷತ್ತಿನ ಭವನಗಳ ನಿರ್ಮಾಣ,ಸ್ಥಳೀಯ ಪ್ರತಿಭಾವಂತರನ್ನು ಗುರುತಿಸಿ ಬೆಳಕಿಗೆತರುವ ಕಾರ್ಯವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿದ್ದು, ಈ ಬಗ್ಗೆ ವ್ಯವಸ್ಥಿತ ಯೋಜನೆಗಳನ್ನು ರೂಪಿಸಲಾಗಿದೆ. ಜಿಲ್ಲೆಯ ಎಲ್ಲಾ ಸಾಹಿತ್ಯಪ್ರೇಮಿಗಳು ಈ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕೋರಿದರು.
ನಿಕಟ ಪೂರ್ವ ಜಿಲ್ಲಾ ಕಸಾಪ ಅಧ್ಯಕ್ಷ ಹನುಮಂತರಾವ್, ಮಾಜಿ ಅಧ್ಯಕ್ಷ ಎಸ್.ವಿ .ನಾಗರಾಜ್ ರಾವ್,ಹಿರಿಯ ಸಾಹಿತಿ ಗೋಪಾಲಗೌಡ ಕಲ್ವಮಂಜಲಿ ಹಾಗೂ ತಾಲೂಕು ಕಸಾಪದ ಅಧ್ಯಕ್ಷ ತ್ಯಾಗರಾಜ್, ವಚನ ಸಾಹಿತ್ಯದ ನಾರಾಯಣಸ್ವಾಮಿ(ಪಟೇಲ್), ಟಿವಿ ಚಂದ್ರಶೇಖರ್ ಉಪಸ್ಥಿತರಿದ್ದರು.