Advertisement

ಅಪರಾಧ ತಡೆಗೆ ಸಹಕಾರ ಕೊಡಿ: ಎಸ್ಪಿ

05:24 PM Dec 20, 2018 | |

ಚಿತ್ರದುರ್ಗ: ಸಮಾಜದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾರ್ವಜನಿಕರು
ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ. ಅರುಣ್‌ ಹೇಳಿದರು.

Advertisement

ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಪ್ರಾಪ್ತರು ಬೈಕ್‌ ಓಡಿಸುವುದು ಸೇರಿದಂತೆ ಯಾವುದೇ ರೀತಿಯ
ಅಪರಾಧ ಮಾಡಿದರೂ ಅವರಿಗೆ ಎಲ್ಲ ರೀತಿಯ ಕಾನೂನು ಅನ್ವಯಿಸುತ್ತದೆ. ಅಪಘಾತವಾಗುವುದು ಆಕಸ್ಮಿಕವಾದರೂ ಅದು ಕೂಡಾ ಅಪರಾಧದ ಒಂದು ಭಾಗವೇ ಆಗಿದೆ. ಆದ್ದರಿಂದ ಅಪರಾಧ ತಡೆಯುವ ಪ್ರಯತ್ನ ಮಾಡಬೇಕು ಎಂದರು.

ಯಾವುದೇ ವಾಹನ ಚಲಾಯಿಸಲು ವಾಹನ ಚಾಲನಾ ಪರವಾನಗಿ ಮುಖ್ಯ. ಪ್ರತಿಯೊಬ್ಬರೂ ಚಾಲನಾ ಪರವಾನಗಿ ಪಡೆದು ವಾಹನ ಚಲಾಯಿಸಬೇಕು. ಪ್ರತಿಯೊಬ್ಬ ವಾಹನ ಸವಾರ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ
ಪಾಲಿಸಬೇಕು. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸಂಚರಿಸುವಾಗ ರಸ್ತೆ ಬದಿಯ ಸೂಚನಾ ಫಲಕಗಳನ್ನು
ಗಮನಿಸಿ ಚಾಲನೆ ಮಾಡಬೇಕು, ಇಲ್ಲವಾದಲ್ಲಿ ಅಪಘಾತವಾಗುವ ಸಾಧ್ಯತೆಗಳಿರುತ್ತವೆ ಎಂದು ಎಚ್ಚರಿಸಿದರು. ವಾಹನವನ್ನು ಮನಬಂದಂತೆ ರಸ್ತೆಯಲ್ಲಿ ಅಡ್ಡಾದಿಡ್ಡಿ ಚಾಲನೆ ಮಾಡುವಾಗ, ಅತಿಯಾದ ವೇಗದಿಂದ ಚಲಾಯಿಸುವ ಸಂದರ್ಭಗಳಲ್ಲಿ ನಿಮ್ಮ ಕುಟುಂಬ ಸದಸ್ಯರನ್ನು ಒಮ್ಮೆ ನೆನಪಿಸಿಕೊಳ್ಳಿ. ನಿಮಗೇನಾದರೂ ಆದರೆ ನಿಮ್ಮ ಕುಟುಂಬ ಬೀದಿಗೆ ಬೀಳುತ್ತದೆ ಎಂಬುದನ್ನು ಮರೆಯದಿರಿ ಎಂದು ವಾಹನ ಸವಾರರಿಗೆ ಕಿವಿಮಾತು ಹೇಳಿದರು. ಕಳ್ಳತನ, ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ಸಹಕರಿಸಿ ಎಂದು
ಅವರು ಮನವಿ ಮಾಡಿದರು.

ಡಿವೈಎಸ್ಪಿ ಸಂತೋಷ್‌ಕುಮಾರ್‌, ಸಿಪಿಐಗಳು, ಪಿಎಸ್‌ಐಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು
ಸೇರಿದಂತೆ ಭಾಗವಹಿಸಿದ್ದರು.  

Advertisement

Udayavani is now on Telegram. Click here to join our channel and stay updated with the latest news.

Next