Advertisement

ಸಂತ್ರಸ್ತೆಗೆ ನೆರವು ಪ್ರತಿಯೊಬ್ಬರ ಜವಾಬ್ದಾರಿ

12:42 PM Mar 20, 2018 | |

ತಿ.ನರಸೀಪುರ: ದೌರ್ಜನ್ಯಗಳಿಗೆ ತುತ್ತಾಗುವ ಮಹಿಳೆಯರು ಮತ್ತು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ತುರ್ತಾಗಿ ವೈದ್ಯಕೀಯ ನೆರವು ಕಲ್ಪಿಸಬೇಕಾದ್ದು ಮಾನವೀಯತೆಯುಳ್ಳ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಆರ್‌.ಚಲುವರಾಜು ಹೇಳಿದರು.

Advertisement

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲೂಕು ಮಟ್ಟದ ಗೆಳತಿ ವಿಶೇಷ ಚಿಕಿತ್ಸಾ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಮಾವನೀಯತೆ ಅರಿವಿಲ್ಲದ ಅನಾಗರೀಕತೆಯ ಸಂಸ್ಕೃತಿಯುಳ್ಳ ವ್ಯಕ್ತಿಗಳಿಂದ ಮಹಿಳೆಯರು ಮತ್ತು ಅಪ್ರಾಪೆ¤ಯರು ಅತ್ಯಾಚಾರಕ್ಕೊಳಗಾಗುತ್ತಿರುವುದು ಅಘಾತಕಾರಿ ಸಂಗತಿಯಾಗಿದ್ದು, ದೈಹಿಕ ಮತ್ತು ಮಾನಸಿಕವಾಗಿ ಬಳಲುವ ಆಕೆಗೆ ಪ್ರಾಥಮಿಕವಾಗಿ ವೈದ್ಯಕೀಯ ನೆರವನ್ನು ತುರ್ತಾಗಿ ಕಲ್ಪಿಸಬೇಕು ಎಂದರು.

ದೌರ್ಜನ್ಯಮುಕ್ತ ಸಮಾಜಕ್ಕೆ ಶ್ರಮಿಸಿ: ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸುವ ಯಾವುದೇ ಯೋಜನೆಗಳು ಅನುಷ್ಠಾನಗೊಳ್ಳಬೇಕಾದರೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಬಹುಮುಖ್ಯವಾಗಿದ್ದರಿಂದ,

ಪ್ರತಿಯೊಬ್ಬ ಅಂಗನವಾಡಿ ಕಾರ್ಯಕರ್ತೆಯರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದಾಗ ಬಹುತೇಕ ಸಾಮಾಜಿಕ ಸಮಸ್ಯೆಗಳು ನಿವಾರಣೆಯಾಗಲಿವೆ. ಈ ದಿಸೆಯಲ್ಲಿ ಚಿಂತನೆಯಾಗಬೇಕು. ಮಹಿಳಾ ಸಂಘಗಳ ಪ್ರತಿನಿಧಿಗಳು ಕೂಡ ದೌರ್ಜನ್ಯಮುಕ್ತ ಸಮಾಜವನ್ನು ನಿರ್ಮಾಣ ಮಾಡುವತ್ತ ಗಮನ ಹರಿಸಬೇಕು ಎಂದು ಆರ್‌.ಚಲುವರಾಜು ಕರೆ ನೀಡಿದರು.

ತಾಲೂಕು ಮಟ್ಟದಲ್ಲೇ ಚಿಕಿತ್ಸಾ ಸೌಲಭ್ಯ: ಸಿಡಿಪಿಒ ಬಿ.ಎನ್‌.ಬಸವರಾಜು ಮಾತನಾಡಿ, ಅತ್ಯಾಚಾರದಂತಹ ಅವಮಾನವೀಯ ದೌರ್ಜನ್ಯಕ್ಕೊಳಗಾದ ಮಹಿಳೆ ಮತ್ತು ಬಾಲಕಿಯ ನೆರವಿಗೆ ತುರ್ತಾಗಿ ಧಾವಿಸಿ ಸಂತ್ರಸ್ತೆಗೆ ಸ್ಥಳೀಯವಾಗಿ ತಾಲೂಕು ಮಟ್ಟದಲ್ಲಿ ಚಿಕಿತ್ಸೆಯನ್ನು ಇಂದಿನಿಂದಲೇ ಒದಗಿಸಲು ರಾಜ್ಯಾದ್ಯಂತ ಗೆಳತಿ ವಿಶೇಷ ಚಿಕಿತ್ಸಾ ಘಟಕಗಳು ಪ್ರಾರಂಭಿಸಲಾಗುತ್ತಿದೆ.

Advertisement

ಹಳ್ಳಿಯಿಂದ ಜಿಲ್ಲಾ ಕೇಂದ್ರಕ್ಕೆ ಕರೆದೊಯ್ಯುವವರೆಗೆ ಅನೇಕ ಅಪ್ರಾಪೆ¤ಯರು ಯಾತನೆ ತಾಳಲಾರದೆ ಸಾವನ್ನಪ್ಪುತ್ತಿದ್ದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ತಾಲೂಕು ಮಟ್ಟದಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗಿದೆ ಎಂದು ತಿಳಿಸಿದರು.

ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಮಲಿಂಗಯ್ಯ, ಸದಸ್ಯ ಎಂ.ರಮೇಶ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗೋವಿಂದರಾಜು, ಮಹಿಳಾ ಸಂರಕ್ಷಣಾಧಿಕಾರಿ ಪೂರ್ಣಿಮಾ, ಆರೋಗ್ಯ ಇಲಾಖೆಯ ಪ್ರೇಮಲತಾ, ಸಮಾಜ ಕಲ್ಯಾಣ ಇಲಾಖೆಯ ಪ್ರದೀಪ, ಆಪ್ತ ಸಮಾಲೋಚಕಿ ನಂದಿನಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸಂಘಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next