Advertisement

ಮತದಾರರ ನೆರವಿಗೆ ಸಹಾಯವಾಣಿ ಸಂಖ್ಯೆ 1950

09:37 PM Mar 23, 2019 | |

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ದೇಶದ ಮತದಾರರಿಗೆ ಎದುರಾಗುವ ವಿವಿಧ ಗೊಂದಲಗಳನ್ನು ಪರಿಹರಿಸಿಕೊಳ್ಳಲು 1950 ಉಚಿತ ಸಹಾಯವಾಣಿಯನ್ನು ಜಾರಿಗೆ ತಂದಿದೆ. ಇಡೀ ದೇಶದಲ್ಲಿ ಈ ಒಂದೇ ಸಂಖ್ಯೆಯು ಕಾರ್ಯ ನಿರ್ವಹಿಸಲಿದೆ.

Advertisement

ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ಹೊಸ ನೋಂದಣಿ, ಹಳೇಯ ಪಟ್ಟಿಯಲ್ಲಿ ತಿದ್ದುಪಡಿ ಹಾಗೂ ತಮ್ಮ ಮತಗಟ್ಟೆಯ ಬಗ್ಗೆ ಮಾಹಿತಿಯನ್ನು ಪಡೆಯಲು ಈ ಸಂಖ್ಯೆಗೆ ಕರೆ ಮಾಡಬಹುದು. ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಇದರ ಕಂಟ್ರೋಲ್‌ ರೂಂಅನ್ನು ತೆರೆಯಲಾಗಿದೆ. ಯಾವ ಜಿಲ್ಲೆಯಲ್ಲಿ ಕರೆ ಮಾಡುತ್ತೆವೆಯೋ ಆ ಜಿಲ್ಲಾ ಕೇಂದ್ರ ಕಂಟ್ರೋಲ್‌ರೂಂಗೆ ಕರೆ ಹೋಗುತ್ತದೆ.

ನಿಮ್ಮ ಮತದಾರರ ಪಟ್ಟಿಯಲ್ಲಿನ ಸಂದೇಹಗಳ ಬಗ್ಗೆ ಈ ಮೂಲಕ ಮಾಹಿತಿ ಪಡೆದು, ಸರಿಪಡಿಸಿಕೊಳ್ಳಬಹುದು. ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಚುನಾವಣಾ ಗುರುತಿನ ಚೀಟಿ ಸಂಖ್ಯೆ ಹೇಳಿದರೆ ನಿಮ್ಮ ಮತದಾರರ ಪಟ್ಟಿಯಲ್ಲಿರುವ ಗೊಂದಲದ ಬಗ್ಗೆ ನೀವು ಕುಳಿತಲ್ಲಿಯೇ ಕ್ಷಣಾರ್ಧದಲ್ಲಿ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಚುನಾವಣಾ ಆಯೋಗವು ಸಿದ್ಧಪಡಿಸಿರುವ ಈ ಸಹಾಯವಾಣಿಯ ಮೂಲಕ ನಿಮ್ಮ ಮತಗಟ್ಟೆ ಸಂಖ್ಯೆ ಹಾಗೂ ಮತದಾನ ಮಾಡಬೇಕಾದ ಸ್ಥಳದ ಬಗ್ಗೆಯೂ ನಿಖರವಾದ ಮಾಹಿತಿಯನ್ನು ಪಡೆಯಬಹುದು.

ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ
ಎಚ್‌.ಡಿ.ಕೋಟೆ:
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ನಾಗನಹಳ್ಳಿ, ಸವ್ವೆ, ಹೆಬ್ಬಲಗುಪ್ಪೆ, ಮಾದಾಪುರ ಹಾಗೂ ಎಚ್‌.ಡಿ.ಕೋಟೆ ಪಟ್ಟಣದಲ್ಲಿ ಸಾರ್ವಜನಿಕರಿಗೆ ಮತದಾನ ಕುರಿತು ಅರಿವು ಮೂಡಿಸಿ, ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

Advertisement

ಈ ಸಂದರ್ಭ ತಾಪಂ ಕಾರ್ಯನಿರ್ವಾಹಕ ಡಾ.ಕೆ.ಎ.ದರ್ಶನ್‌ ಮಾತನಾಡಿ, ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಹಾಕುವ ಮೂಲಕ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು. ಈ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಸಾರ್ವಜಿನಿಕರ ಮತಯಂತ್ರ ಬಳಕೆ ಕುರಿತು ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ  ನರೇಗಾ ಸಹಾಯಕ ನಿರ್ದೇಶಕ ಜೆರಾಲ್ಡ್‌ ರಾಜೇಶ್‌, ತಾಲೂಕು ಯೋಜನಾಧಿಕಾರಿ ರವೀಂದ್ರಕುಮಾರ್‌  ಧನಂಜಯ್‌, ಗುರು, ಎಸ್‌.ಪಿ.ಮಂಜು, ಪುಟ್ಟಸ್ವಾಮಿ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next