ದೇವನಹಳ್ಳಿ: ತಾಲೂಕಿನಲ್ಲಿ ಅನಾ ರೋಗ್ಯದಿಂದ ಸಾಕಷ್ಟು ಜನರು ಬಳಲು ತ್ತಿದ್ದು, ಅಂತಹವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣದ ಚೆಕ್ ನೀಡಿ ನೆರವಾಗುವ ಕೆಲಸ ಮಾಡಲಾ ಗುತ್ತಿದೆ ಎಂದು ಶಾಸಕ ನಿಸರ್ಗ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು. ತಾಲೂಕಿನ ಬಿದಲೂರು ಗ್ರಾಮದಲ್ಲಿ ಅಪಘಾತದಲ್ಲಿ ತೊಂದರೆಗೆ ಒಳಗಾದ ವೆಂಕಟೇಶ್ ಅವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರಾಗಿದ್ದ 2 ಲಕ್ಷ ರೂ. ಚೆಕ್ ವಿತರಿಸಿ ಅವರು ಮಾತನಾಡಿದರು.
ಸಿಎಂರಿಂದ ಹೆಚ್ಚಿನ ನೆರವು: ತಾಲೂಕಿನಲ್ಲಿ ತಾವು ಶಾಸಕರಾದ ಮೇಲೆ ಹಲವಾರು ಜನರಿಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯ ಚೆಕ್‌ಗಳನ್ನು ವಿತರಿ ಸಲಾಗಿದೆ. ಈ ಹಿಂದೆ ಜನರಲ್ಲಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯ ಮಾಹಿತಿ ಕೊರತೆಯಿತ್ತು. ರೋಗಗಳಿಂದ ಬಳಲು ತ್ತಿರುವವರು ನಮ್ಮ ಕಚೇ ರಿಗೆ ಅಗತ್ಯ ದಾಖಲಾತಿಗಳನ್ನು ನೀಡಿದರೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿ ಯಿಂದ ಚೆಕ್ ಬರುವಂತೆ ಮಾಡಲಾಗು ವುದು ಎಂದು ತಿಳಿಸಿದರು.
ವೆಂಕಟೇಶ್ ಅವರಿಗೆ 2 ಲಕ್ಷ ರೂ. ಚೆಕ್ ಬಂದಿದ್ದು, ಗ್ರಾಮದಲ್ಲಿಯೇ ನೀಡುತ್ತಿದ್ದೇವೆ. ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ತಾಲೂಕಿಗೆ ಹೆಚ್ಚಿನ ನೆರವು ನೀಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಿಲ್ ಮತ್ತು ಕಡೆಯ ಬಿಲ್‌ನೀಡಬೇಕು. ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ತಿಳಿಸಿದರು.
ಆರೋಗ್ಯ ಕಾಪಾಡಿಕೊಳ್ಳಿ: ಇತ್ತೀಚಿನ ದಿನಗಳಲ್ಲಿ ಹೆಚ್ಚು ಮಂದಿ ಕ್ಯಾನ್ಸರ್ ರೋಗದಿಂದ ಸಾವನ್ನಪ್ಪುತ್ತಿದ್ದಾರೆ. ಪ್ರತಿ ಯೊಬ್ಬರೂ ಆರೋಗ್ಯವನ್ನು ಕಾಪಾಡಿ ಕೊಳ್ಳಬೇಕು. ಆರೋಗ್ಯ ಇಲ್ಲದಿದ್ದರೆ ಏನನ್ನೂ ಸಾಧನೆ ಮಾಡಲು ಸಾಧ್ಯವಿಲ್ಲ. ಗ್ರಾಮಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಪರಿಸರ ಸ್ವಚ್ಛವಾಗಿದ್ದರೆ ಆರೋಗ್ಯವಂತ ಸಮಾಜ ನಿರ್ಮಾಣ ವಾಗುತ್ತದೆ. ತಾಲೂಕಿನ ಸಮಗ್ರ ಅಭಿ ವೃದ್ಧಿಗಾಗಿ ಶ್ರಮಿಸಲಾಗುವುದು ಎಂದು ಹೇಳಿದರು.
ಈ ವೇಳೆ ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಶ್ರೀನಿವಾಸ್, ಎಪಿಎಂಸಿ ಅಧ್ಯಕ್ಷ ಕೆ.ವಿ. ಮಂಜುನಾಥ್, ಕಸಬಾ ಹೋಬಳಿ ಅಧ್ಯಕ್ಷ ಚಿಕ್ಕನಾರಾಯಣಸ್ವಾಮಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮುನಿ ರಾಜು, ತಾಲೂಕು ಸೊಸೈಟಿ ಅಧ್ಯಕ್ಷ ಶ್ರೀರಾಮಯ್ಯ, ಬಿಡಿಸಿಸಿ ಬ್ಯಾಂಕ್ ನಿರ್ದೇ ಶಕ ಸೊಣ್ಣಪ್ಪ, ವಿಎಸ್‌ಎಸ್‌ಎನ್ ಅಧ್ಯಕ್ಷ ಆನಂದ್, ನಿರ್ದೇಶಕ ಮಹೇಶ್ ಸೇರಿದಂತೆ ಸ್ಥಳೀ ಯ ಮುಖಂಡರು ಮುಂತಾದವರು ಈ ಸಂದರ್ಭದಲ್ಲಿ ಶಾಸಕರ ಜತೆಗೆ ಹಾಜರಿದ್ದರು.