Advertisement

ಐಎಎಸ್‌-ಐಪಿಎಸ್‌ ಪರೀಕ್ಷಾರ್ಥಿಗಳಿಗೆ ನೆರವು

07:00 PM Sep 26, 2020 | Suhan S |

ಬಳ್ಳಾರಿ: ವಾಲ್ಮೀಕಿ ಸಮುದಾಯದ ಯಾರಾದರೂ ಐಎಎಸ್‌ ಮತ್ತು ಐಪಿಎಸ್‌ ಇತರೆ ಉನ್ನತ ಹುದ್ದೆಗಳ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಆಸಕ್ತ ಅಭ್ಯರ್ಥಿಗಳಿಗೆ ಸಹಾಯ ಧನದ ನೆರವನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ವಾಲ್ಮೀಕಿ ನೌಕರರ ಸಂಘದ ಜಿಲ್ಲಾಧ್ಯಕ್ಷರು, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಎಸ್‌.ಶಿವಣ್ಣ ತಿಳಿಸಿದರು.

Advertisement

ತಾಲೂಕಿನ ಮೋಕ ಗ್ರಾಮದ ಮಲ್ಲೇಶ್ವರ ದೇವಸ್ಥಾನದ ಹತ್ತಿರ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ವಾಲ್ಮೀಕಿ ನೌಕರರ ಸಂಘದಿಂದ ಈಚೆಗೆ ಹಮ್ಮಿಕೊಳ್ಳಲಾಗಿದ್ದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಂಘದ ವತಿಯಿಂದ ವಾಲ್ಮೀಕಿ ಸಮುದಾಯದ ಬಡವಿದ್ಯಾರ್ಥಿಗಳಿಗೆ ಸಹಾಯ ಸಹಕಾರವನ್ನು ನೀಡಲಾಗುವುದು. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕು. ವಿದ್ಯಾರ್ಥಿಗಳಿಗೆ ಈ ರೀತಿಯ ಸನ್ಮಾನ ಮಾಡುವ ಮೂಲಕ ಪ್ರೇರೇಪಣೆ ನೀಡಿದಂತಾಗುತ್ತದೆ ಎಂದವರು ತಿಳಿಸಿದರು.

ಸಂಘದ ಜಿಲ್ಲಾ ಉಪಾಧ್ಯಕ್ಷ, ರುಕ್ಮಿಣಮ್ಮ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ಸುಧಾಕರ್‌, ಜಂಟಿ ಕಾರ್ಯದರ್ಶಿ ಶ್ರೀಧರ್‌ ಸೇರಿದಂತೆ ಸಂಘದ ಎಲ್ಲ ಪದಾಧಿಕಾರಿಗಳು ಸದಸ್ಯರು ಹಾಗೂ ಊರಿನ ಮುಖಂಡರು ಮಾತನಾಡಿದರು. ಇದೇ ವೇಳೆ ಸಮುದಾಯದ ನಿವೃತ್ತ ನೌಕರರಾದ ಲೋಕೊಪಯೋಗಿ ಇಲಾಖೆಯ ಕೆ. ವಿಠೋಬ, ಶಿಕ್ಷಕ ಕೆ.ನಾರಾಯಣಪ್ಪ, ಪೊಲೀಸ್‌ ಇಲಾಖೆ ಮಜ್ಜಿಗೆ ಹೊನ್ನೂರಪ್ಪ ಇವರನ್ನು ಸನ್ಮಾನಿಸಲಾಯಿತು.

ಆರಂಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಶಶಿಧರ್‌ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಕೆಂಚಪ್ಪ ನಿರೂಪಿಸಿದರು. ಉಪನ್ಯಾಸಕ ಡಿ.ಆಂಜನೇಯ ವಂದಿಸಿದರು. ಇದೇ ವೇಳೆ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಬಳ್ಳಾರಿ ಜಿಲ್ಲೆಯ ಎಲ್ಲ ಹೋಬಳಿಗಳಲ್ಲಿ ಮಾಡಲು ತೀರ್ಮಾನಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next