Advertisement

ಅಸಂಘಟಿತ ಕಾರ್ಮಿಕರಿಗೆ ನೆರವು

07:08 AM Jul 08, 2020 | Lakshmi GovindaRaj |

ಹಾಸನ: ಕೋವಿಡ್‌ 19 ನಿಯಂತ್ರಣಕ್ಕೆ ಜಾರಿ ಯಾದ ಲಾಕ್‌ಡೌನ್‌ನಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಅಗಸ ಮತ್ತು ಕ್ಷೌರಿಕ ವೃತ್ತಿಯವರಿಗೆ ಸರ್ಕಾರದ ಸಹಾಯ ಧನವನ್ನು ಶೀಘ್ರವಾಗಿ ತಲುಪಿಸಬೇಕು ಎಂದು ಕಾರ್ಮಿಕ  ಮತ್ತು ಸಕ್ಕರೆ ಸಚಿವ ಆರ್‌. ಶಿವರಾಮ ಹೆಬ್ಬಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಪರಿಹಾರ ನೀಡಲು  ಹೆಚ್ಚು ನಿಬಂಧನೆಗಳನ್ನು ಹೇರಬಾರದು. ಅಗತ್ಯ ದಾಖಲೆಗಳನ್ನು ಮಾತ್ರ ಪಡೆದು ಪರಿಶೀಲನೆ ಮಾಡಿ ಮುಂದಿನ ಎರಡು ಮೂರು ದಿನಗಳಲ್ಲಿ ಸಹಾಯಧನ ತಲುಪಿಸಿ ಎಂದು ಹೇಳಿದರು.

ಜಿಲ್ಲೆಯಲ್ಲಿ 2,630 ಜನರ  ನೋಂದಣಿ: ಜಿಲ್ಲೆಯಲ್ಲಿ ಒಟ್ಟು 2,630 ಜನರು ಈಗಾಗಲೇ ಸಹಾಯಧನ ಪಡೆಯಲು ನೋಂದಾ ಯಿಸಿಕೊಂಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ 34,000 ಫ‌ಲಾನುಭವಿಗಳಿಗೆ 18 ಕೋಟಿ ರೂ. ಪರಿಹಾರಧನ ಬಿಡುಗಡೆ ಮಾಡಲಾಗಿದೆ. ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಿ ಅರ್ಹರಿಗೆ ಸೌಲಭ್ಯ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದರು. ರಾಜ್ಯದಲ್ಲಿ ಅನೇಕ ಕಾರ್ಮಿಕರು ಆರ್ಥಿಕ ಸಂಕಷ್ಟವನ್ನು ಎದರಿಸುತ್ತಿದ್ದಾರೆ.

ಮನೆ ಕೆಲಸ ಮಾಡುವ, ಗಾರ್ಮೆಂಟ್ಸ್‌ಗಳಿಗೆ  ಹೋಗುವ ಸುಮಾರು 20 ಲಕ್ಷ ಹೆಣ್ಣುಮಕ್ಕಳು ಇಂದು ಕೆಲಸವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಅನೇಕ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸೂಕ್ತ ಅನುಕೂಲ ಮಾಡಿಕೊಡಲಾಗುವುದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ಕಾರ್ಮಿಕರಿಗೆಂದು  ಮೀಸಲಿರುವ ಹಣವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಗಂಭೀರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಕಾರ್ಮಿಕರ ಭವನ ನಿರ್ಮಿಸಿ: ಶಾಸಕ ಕುಮಾರಸ್ವಾಮಿ ಮಾತನಾಡಿ, ಸಕಲೇಶಪುರ, ಆಲೂರು, ಬೇಲೂರು ತಾಲೂಕುಗಳಲ್ಲಿ ಸುಮಾರು 3 ಲಕ್ಷ ಕಾಫಿ ತೋಟ ಕಾರ್ಮಿಕರಿದ್ದಾರೆ. ಸಕಲೇಶಪುರ ಉಪ ವಿಭಾಗ ಕೇಂದ್ರದಲ್ಲಿ ಹೊಸ ಕಾರ್ಮಿಕರ  ಭವನ ಮಂಜೂರು ಮಾಡಿ ಶೀಘ್ರ ನಿರ್ಮಾಣ ಮಾಡುವ ಅಗತ್ಯವಿದೆ. ಇದಕ್ಕೆ ತಾವು ಸೂಕ್ತ ನಿವೇಶನ ಒದಗಿಸುವುದಾಗಿ ಭರವಸೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಶೀಘ್ರವೇ ಈ ಬಗ್ಗೆ ಪ್ರಸ್ತಾಪನೆ ಸಲ್ಲಿಸುವಂತೆ  ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಅನುದಾನ ಮಂಜೂರಾತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಶಾಸಕ ಪ್ರೀತಂ ಜೆ.ಗೌಡ, ವಿಪ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಜಿಲ್ಲಾಧಿ ಕಾರಿ ಆರ್‌. ಗಿರೀಶ್‌, ಜಿಲ್ಲಾ  ಪೊಲೀಸ್‌ ವರಿಷ್ಠಾಧಿ ಕಾರಿ ಆರ್‌.ಶ್ರೀನಿವಾಸ್‌ ಗೌಡ, ಜಿಪಂ ಸಿಇಒ ಬಿ.ಎ.ಪರಮೇಶ್‌, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಕೃಷ್ಣ, ಸಹಾಯಕ ಕಾರ್ಮಿಕ ಆಯುಕ್ತ ಕೆ.ಜಿ. ಜಾನ್ಸನ್‌ ಸಭೆಯಲ್ಲಿ  ಹಾಜರಿದ್ದರು.

ವಾಹನ ಚಾಲಕರ ಕಲ್ಯಾಣಕ್ಕೆ ಇಂಧನ ಸೆಸ್‌: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ವಾಹನ ಚಾಲಕರ ಕಲ್ಯಾಣ ಮಂಡಳಿ ಗಳನ್ನು ರಚನೆ ಮಾಡಿ ಇಂಧನದಿಂದ ಬರುವ ತೆರಿಗೆಯಲ್ಲಿ ಶೇ.1 ರಷ್ಟನ್ನು ನೇರವಾಗಿ ಮಂಡಳಿಗೆ ಪಾವತಿಯಾಗುವಂತೆ ಮಾಡುವ ಚಿಂತನೆ ಇದೆ. ವಾಹನ ಚಾಲಕರಿಗೆ ಹಾಗೂ ಅವರ ಕುಟುಂಬಕ್ಕೆ ತುರ್ತು ಪರಿಸ್ಥಿತಿಯಲ್ಲಿ ಕಲ್ಯಾಣ ಮಂಡಳಿ ಯಿಂದ ಧನಸಹಾಯ ದೊರೆಯುವಂತೆ ಮಾಡಲು ಉದ್ದೇಶಿಸಲಾಗಿ ಎಂದು ಸಚಿವ ಹೆಬ್ಬಾರ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next