Advertisement

Assistant Professor: ಸಹಾಯಕ ಪ್ರಾಧ್ಯಾಪಕ ಹುದ್ದೆ ನೇರ ನೇಮಕಾತಿ ಅಕ್ರಮ: ಸಮಿತಿ ರಚನೆ

10:25 PM Aug 31, 2023 | Team Udayavani |

ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇರ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ತನಿಖಾ ವರದಿ ಮತ್ತೂಮ್ಮೆ ಪರಿಶೀಲಿಸಲು ಉನ್ನತ ಶಿಕ್ಷಣ ಇಲಾಖೆಯು ಪ್ರತ್ಯೇಕ ತ್ರಿಸದಸ್ಯ ಸಮಿತಿ ರಚಿಸಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

Advertisement

ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು, ಕಾನೂನು ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ, ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ ಆದೇಶಿಸಲಾಗಿದೆ.

2021ರಲ್ಲಿ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಬೆಳಕಿಗೆ ಬಂದ ಕಾರಣ ಕೆಇಎ ಪೊಲೀಸ್‌ ದೂರು ದಾಖಲಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು 2023 ಜುಲೈ ತಿಂಗಳಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಸಿದ್ದರು. ಈ ಸಮಿತಿಯ ಸತ್ಯಾಸತ್ಯತೆ ಪರಿಶೀಲನೆಗೆ ಉನ್ನತ ಶಿಕ್ಷಣ ಇಲಾಖೆಯು ಪ್ರತ್ಯೇಕ ಸಮಿತಿ ರಚಿಸಿದೆ. 1,242 ಸಹಾಯಕ ಪ್ರಧ್ಯಾಪಕರ ನೇಮಕಾತಿ ಬಗ್ಗೆ ತನಿಖಾ ವರದಿ ಬರುವ ಮೊದಲೇ ಕೆಇಎ ಅಂತಿಮ ಪಟ್ಟಿ ಬಿಡುಗಡೆ ಮಾಡಿತ್ತು. ಆ ವೇಳೆ ಸರಕಾರ ಬದಲಾದ ಹಿನ್ನೆಲೆಯಲ್ಲಿ ಪಟ್ಟಿಯನ್ನು ತಡೆಹಿಡಿದು ತನಿಖೆಗೆ ಸೂಚಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next