ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಐಚ್ಛಿಕ ವಿಷಯಗಳ ಪರೀಕ್ಷಾ ಸಮಯವನ್ನು ಬದಲಾಯಿಸಲಾಗಿದೆ.
ಕಡ್ಡಾಯ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಮಾ. 12 ಮತ್ತು 13ರಂದು ಕನ್ನಡ ಮತ್ತು ಇಂಗ್ಲಿಷ್ ಕಡ್ಡಾಯ ಪರೀಕ್ಷೆಗಳು ನಡೆಯಲಿದ್ದು, ಇದರಲ್ಲಿ ಬದಲಾವಣೆ ಇಲ್ಲ. ಮಾ.14ರಿಂದ 16ರ ವರೆಗೆ ನಡೆಯುವ ಐಚ್ಛಿಕ ವಿಷಯಗಳಲ್ಲಿ ಬದಲಾವಣೆ ಮಾಡಲಾಗಿದೆ.
ಮಾ.14ರಿಂದ 16ರ ವರೆಗೆ ಬೆಳಗಿನ ಸಮಯದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಿಗದಿಯಾಗಿದ್ದ ಪರೀಕ್ಷೆಯು 9ಕ್ಕೆ ಆರಂಭವಾಗಿ ಮಧ್ಯಾಹ್ನ 12 ಗಂಟೆಗೆ ಮುಕ್ತಾಯವಾಗಲಿವೆ.
ಬೆಳಗ್ಗಿನ ಅವಧಿಯಲ್ಲಿ ಪರೀಕ್ಷೆ ಮುಗಿಸಿ ಮಧ್ಯಾಹ್ನದ ಅವಧಿಯ ಪರೀಕ್ಷೆಗೆ ಹಾಜರಾಗಲು ಅನುಕೂಲವಾಗುವಂತೆ ಪರೀಕ್ಷಾ ಸಮಯವನ್ನು ಬದಲಾವಣೆ ಮಾಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.