Advertisement

ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗಳು ಸುಸೂತ್ರ

09:58 PM Mar 13, 2022 | Team Udayavani |

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ರವಿವಾರ ನಡೆದ ಕಡ್ಡಾಯ ಪತ್ರಿಕೆ-1 (ಕನ್ನಡ) ಮತ್ತು ಕಡ್ಡಾಯ ಪತ್ರಿಕೆ-2 (ಇಂಗ್ಲಿಷ್‌) ಪತ್ರಿಕೆಗಳಿಗೆ ಶೇ. 88.93ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದಾರೆ.

Advertisement

ಎಲ್ಲ ಜಿಲ್ಲೆಗಳಲ್ಲಿ ಯಾವುದೇ ತೊಂದರೆಯಾಗದೆ, ಪರೀಕ್ಷೆಯು ಸುಸೂತ್ರವಾಗಿ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ನಾಳಿನ ಪರೀಕ್ಷೆಗಳು
ಪರೀಕ್ಷೆಯ ಮೂರನೇ ದಿನವಾದ ಸೋಮವಾರ ಐಚ್ಛಿಕ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 9ರಿಂದ 12 ಗಂಟೆಯವರೆಗೆ ಕನ್ನಡ, ಉರ್ದು, ಸಸ್ಯಶಾಸ್ತ್ರ, ಭೂಗೋಳಶಾಸ್ತ್ರ, ಫ್ಯಾಷನ್‌ ಟೆಕ್ನಾಲಜಿ ಪರೀಕ್ಷೆಗಳು ನಡೆಯಲಿವೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಜ್ಯಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಭೂಗರ್ಭಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

 

Advertisement

Udayavani is now on Telegram. Click here to join our channel and stay updated with the latest news.

Next