Advertisement

ಪುತ್ತೂರು: ನೃತ್ಯ ವಿದುಷಿ ಆಸ್ತಿಕಾ ಸುನಿಲ್ ಶೆಟ್ಟಿ ನಿಧನ

08:56 PM Mar 07, 2023 | Team Udayavani |

ಪುತ್ತೂರು : ಖ್ಯಾತ ನೃತ್ಯ ಗುರು ವಿದ್ವಾನ್ ದಿ. ಕುದ್ಕಾಡಿ ವಿಶ್ವನಾಥ ರೈ ಅವರ ಕಿರಿಯ ಪುತ್ರಿ ಪಡುವನ್ನೂರು ಗ್ರಾಮದ ಕುದ್ಕಾಡಿ ನಿವಾಸಿ, ಬಹರೈನ್ ನಲ್ಲಿ ನೆಲೆಸಿದ್ದ ನೃತ್ಯ ವಿದುಷಿ ಆಸ್ತಿಕಾ ಸುನಿಲ್ ಶೆಟ್ಟಿ (46) ಮಾ.7 ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತಿ, ಪುತ್ರನನ್ನು ಅಗಲಿದ್ದಾರೆ.

Advertisement

ಕಲಾವಿದರ ಕುಟುಂಬದಲ್ಲಿ ಜನಿಸಿದ ಆಸ್ತಿಕಾ ರೈ ಪದಡ್ಕ ವಿಶ್ವಕಲಾನಿಕೇತನದಲ್ಲಿ ಕಲಿತು ನೃತ್ಯ, ಯಕ್ಷಗಾನದಲ್ಲಿ ಪಳಗಿದ್ದರು. ಭರತನಾಟ್ಯ ಕಲಾವಿದೆಯಾಗಿ, ಯಕ್ಷಗಾನ ಕಲಾವಿದೆಯಾಗಿ ಬಹರೈನ್ ದೇಶದಲ್ಲಿ ಸುದೀರ್ಘ ಕಾಲ ಕಲಾಸರಸ್ವತಿಯನ್ನು ಆರಾಧಿಸುತ್ತಾ ಬಂದಿದ್ದರು.

ಬಹರೈನ್ ಯಕ್ಷಗಾನ ರಂಗದಲ್ಲಿ ಅವರು ಸುಧನ್ವಮೋಕ್ಷದ ಕೃಷ್ಣನಾಗಿ, ಕೋಟಿಚೆನ್ನಯದ ಕಿನ್ನಿದಾರುವಾಗಿ, ಶಾಂಭವಿವಿಲಾಸದ ಶಾಂಭವಿಯಾಗಿ ಮೊದಲಾದಿ ಪಾತ್ರಗಳಿಗೆ ಜೀವ ತುಂಬಿ ಅಭಿನಯಿಸಿದ್ದರು. ಪುತ್ತೂರಿನಲ್ಲಿ ಇರುವಾಗ ತಂದೆ ವಿದ್ವಾನ್ ವಿಶ್ವನಾಥ ರೈ ಹಾಗೂ ತಾಯಿ ವಿದುಷಿ ನಯನಾ ವಿ ರೈ ಅವರೊಂದಿಗೆ ನೃತ್ಯ ರಂಗದಲ್ಲಿ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ: ಬಾಂಗ್ಲಾದೇಶದ ಬಹುಮಹಡಿ ಕಟ್ಟಡದಲ್ಲಿ ಭೀಕರ ಸ್ಫೋಟ; 8 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

Advertisement

Udayavani is now on Telegram. Click here to join our channel and stay updated with the latest news.

Next