Advertisement
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರಕಾರ ಜಾರಿಗೊಳಿಸಲು ಉದ್ದೇಶಿಸಿದ್ದ ಮೌಡ್ಯ ಪ್ರತಿಬಂಧಕ ಕಾಯ್ದೆಯನ್ನು ಕೆಲವು ಬದಲಾವಣೆಗಳೊಂದಿಗೆ ಸರಕಾರ ಜಾರಿಗೊಳಿಸಿದೆ. ಧರ್ಮದ ಹೆಸರಿನಲ್ಲಿ ನಡೆಯುವ ಎಲ್ಲ ರೀತಿಯ ಮೌಡ್ಯವನ್ನು ನಿಷೇಧಿಸಬೇಕು. ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಧರ್ಮದ ವಿಷಯಗಳನ್ನು ಎಳೆದು ತಂದಿದ್ದರಿಂದ ವಿರೋಧಿಸಲಾಗಿತ್ತು. ಮಕ್ಕಳನ್ನು ಮುಳ್ಳಿನ ಮೇಲೆ ಮಲಗಿಸುವುದು, ಮೇಲಿನಿಂದ ಕೆಳಕ್ಕೆ ಎಸೆಯುವುದು ಸಹಿತ ಇತರ ಆಚರಣೆಗಳಿಗೆ ನನ್ನ ವಿರೋಧವಿದೆ ಎಂದು ಹೇಳಿದರು.
Related Articles
ನಿವೇಶನಗಳ ನೋಂದಣಿ ವೇಳೆ ಅಕ್ರಮ ತಡೆಗೆ “ಕಾವೇರಿ’ ತಂತ್ರಾಂಶ ಬಳಸಿಕೊಳ್ಳಲಾಗುತ್ತಿದೆ. ದಾಖಲೆಗಳು ಸರಿಯಾಗಿಲ್ಲದಿದ್ದರೆ ತಂತ್ರಾಂಶವು ನೋಂದಣಿಗೆ ಅವಕಾಶ ನೀಡುವುದಿಲ್ಲ. ಇದರಿಂದಾಗಿ ಭೂಪರಿವರ್ತನೆಯಾಗದ ಮತ್ತು ಸಕ್ಷಮ ಯೋಜನಾ ಪ್ರಾಧಿಕಾರದಿಂದ ಮಂಜೂರಾತಿ ಸಿಗದ ಕಂದಾಯ ನಿವೇಶನಗಳ ನೋಂದಣಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
Advertisement
ಮುಖ್ಯಮಂತ್ರಿಗಳು ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳು ಈಗಾಗಲೇ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ್ದು, ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರೊಂದಿಗೂ ಮತ್ತೂಮ್ಮೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ.
ಹೈಕಮಾಂಡ್‌ನಿಂದ ಸಂಪುಟ ವಿಸ್ತರಣೆಗೆ ಯಾವುದೇ ತಕರಾರು ಇಲ್ಲ. ಉಪ ಚುನಾವಣೆಯಲ್ಲಿ ಗೆದ್ದ ಅರ್ಹ ಶಾಸಕರಿಗೆ ಈ ಹಿಂದೆ ನೀಡಿದ್ದ ಭರವಸೆಯಂತೆ ನಡೆದುಕೊಳ್ಳಲಾಗುವುದು. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸಂಪುಟ ವಿಸ್ತರಣೆ ವಿಳಂಬವಾಗುವುದಿಲ್ಲ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.