Advertisement

ಆಟಿ ಅಮವಾಸ್ಯೆಯ ಶುಭ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:12 AM Jul 28, 2022 | Team Udayavani |

ಮೇಷ:

Advertisement

ದೀರ್ಘ‌ ಪ್ರಯಾಣ. ನಷ್ಟದ್ರವ್ಯವನ್ನು ಪಡೆಯಲು ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೂರದ ವ್ಯವಹಾರಗಳಿಂದ ಧನಾಗಮನ. ಅಧ್ಯಯನ ಪ್ರವೃತ್ತರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

ವೃಷಭ:

ಅನಿರೀಕ್ಷಿತ ಸ್ಥಾನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ನಡೆ. ಧನ ಸಂಪತ್ತಿನ ಅಭಿವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮಾನಸಿಕ ತೃಪ್ತಿ.

ಮಿಥುನ:

Advertisement

ಮಕ್ಕಳಿಂದ ಸಂತೋಷ ವೃದ್ಧಿ. ಅಧ್ಯಯನ ಪ್ರವೃತ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ, ಮಾರ್ಗದರ್ಶನ. ದೈಹಿಕ, ಮಾನಸಿಕ, ಆರೋಗ್ಯ ವೃದ್ಧಿ. ಧನಾಗಮನಕ್ಕೆ ಸರಿಯಾಗಿ ಧನ ವ್ಯಯ ಸಂಭವ.

ಕರ್ಕ:

ಆರೋಗ್ಯ ಗಮನಿಸಿ- ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ದಂಪತಿಗಳಿಗೆ ಪರಸ್ಪರ ಪ್ರೋತ್ಸಾಹ ಅಗತ್ಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಸ್ಪಷ್ಟತೆ ಇರಲಿ. ಆಸ್ತಿ ಕ್ರಯವಿಕ್ರಯ ವಿಚಾರದಲ್ಲಿ ಮುನ್ನಡೆ.

ಸಿಂಹ:

ಆರೋಗ್ಯ ಗಮನಿಸಿ. ಹಠಮಾರಿತನದಿಂದ ನಷ್ಟ ಸಂಭವ. ಆರ್ಥಿಕ ವಿಚಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ:

ಉತ್ತಮ ವಾಕ್‌ ಚತುರತೆ ಪ್ರದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವ ಸುಖಾದಿ ಲಭ್ಯ. ಉತ್ತಮ ಧನಾರ್ಜನೆ. ಅಧ್ಯಯನ ಪ್ರವೃತ್ತರಿಗೆ ಸರ್ವ ಸೌಲಭ್ಯ ಪ್ರಾಪ್ತಿ. ದಂಪತಿಗಳಿಗೆ ಪರಸ್ಪರರಿಂದ ಲಾಭ.

ತುಲಾ:

ಆರೋಗ್ಯ ವೃದ್ಧಿ. ದಾರ್ಮಿಕ ಕೆಲಸ ಕಾರ್ಯಗಳಿಗೆ ಪ್ರಯಾಣ. ಗೌರವ ಧನ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಸಂಭ್ರಮ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ವೃಶ್ಚಿಕ:

ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಅಧಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ. ಗಣ್ಯರ ಭೇಟಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.

ಧನು:

ಆರೋಗ್ಯದಲ್ಲಿ ಸಮಾದಾನ. ಚಿಕ್ಕ ಪ್ರಯಾಣ ಸಂಭವ. ಮಾನಸಿಕವಾಗಿ ಸಂಭ್ರಮಿಸುವ ಕಾಲ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಉದ್ಯೋಗ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿ ಹಾಗೂ ಉತ್ತಮ ಬದಲಾವಣೆಯ ಅವಕಾಶ. ಸಾಂಸಾರಿಕ ಸುಖ ಮದ್ಯಮ.

ಮಕರ:

ಆರೋಗ್ಯದಲ್ಲಿ ವೃದ್ಧಿ. ಪರವೂರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಪಾಲುಪಾರಿಕಾ ಕ್ಷೇತ್ರದವರಿಗೆ ಪರಸ್ಪರ ಸಹಕಾರದಿಂದ ಉನ್ನತಿ. ಮೇಲಧಿಕಾರಿಗಳ ಗಣ್ಯರ ಮಾರ್ಗದರ್ಶನ ಸಹಾಯ ಅನುಭವವಾದೀತು.

ಕುಂಭ:

ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್‌ಚತುರತೆ ಮನೋರಂಜನೆಯಿಂದ ಕೂಡಿದ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ.

ಮೀನ:

ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃ ಸಂತೋಷ. ಜನಮನ್ನಣೆ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಸಾಂಸಾರಿಕ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಸುದೃಢ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next