Advertisement

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

06:58 AM Nov 02, 2022 | Team Udayavani |

ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಅಪೇಕ್ಷಿಸಿದಂತೆ ಧನಾರ್ಜನೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಅಭಿವೃದ್ಧಿಗಾಗಿ ಧನವ್ಯಯ ಸಂಭವ.
ಅವಿವಾಹಿತರಿಗೆ ವಿವಾಹ ಭಾಗ್ಯ.

Advertisement

ವೃಷಭ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ.

ಮಿಥುನ: ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನರಿಂದ ಸಂದಭೋìಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣ ಪುಟ್ಟ ಕಿರಿಕಿರಿಗಳು ತೋರಬಹುದು.

ಕರ್ಕ: ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.

ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

Advertisement

ಕನ್ಯಾ: ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ .

ವೃಶ್ಚಿಕ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮ ಸಹಕಾರ. ಮನೆಯಲ್ಲಿ ಸಂಭ್ರಮ.

ಧನು: ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರುಹಿರಿಯರಿಂದ ಉತ್ತಮ ಸಹಕಾರ.

ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.

ಕುಂಭ: ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ ಇತ್ಯಾದಿ ಶುಭಫ‌ಲ.

ಮೀನ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ.

Advertisement

Udayavani is now on Telegram. Click here to join our channel and stay updated with the latest news.

Next