Advertisement

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:35 AM Mar 17, 2022 | Team Udayavani |

ಮೇಷ:

Advertisement

ಘರ್ಷಣೆಯೊಂದಿಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸುವುದರಿಂದ ಉದ್ಯೋಗ ವ್ಯವಹಾರ ಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ.

 ವೃಷಭ:

ಧಾರ್ಮಿಕ ಕ್ಷೇತ್ರ ಸಂದರ್ಶನ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹೆಚ್ಚಿನ ನಿರೀಕ್ಷೆ ಸಲ್ಲದು.

 ಮಿಥುನ:

Advertisement

ನಿರೀಕ್ಷೆಯಂತೆ ಉತ್ತಮ ವಾಕ್‌ ಚತುರತೆಯಿಂದ ಹೆಚ್ಚಿದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ.

ಕರ್ಕ:

ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ ಗಳಿಸಲು ಹೆಚ್ಚು ತಾಳ್ಮೆ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.

 ಸಿಂಹ:

ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ.

ಕನ್ಯಾ:

ಸ್ವಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಮಕ್ಕಳಿಂದ ಹೆಚ್ಚಿದ ಸಂತೋಷ. ವಾಕ್‌ ಚತುರತೆಯಿಂದ ಜನರಂಜನೆ.

ತುಲಾ:

ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ:

ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವ ರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ.

ಧನು:

ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಮಕರ:

ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು ಜನಮನ್ನಣೆ. ಉತ್ತಮ ವಾಕ್‌ ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ‌ ಪ್ರಯಾಣ ಯೋಗ.

ಕುಂಭ:

ಉತ್ತಮ ಕಾರ್ಯ ಚಟುವಟಿಕೆ ಯಿಂದ ಕೂಡಿದ ದಿನಚರಿ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮದಿಂದ ಕಾರ್ಯ ಸಫ‌ಲತೆ.

ಮೀನ:

ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ಆಸ್ತಿ ಸಂಬಂಧ ವಿಷಯಗಳಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ತಾಳ್ಮೆ ಸಹನೆ ಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಸುಖ.

Advertisement

Udayavani is now on Telegram. Click here to join our channel and stay updated with the latest news.

Next