Advertisement

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

07:27 AM Feb 01, 2022 | Team Udayavani |

ಮೇಷ:

Advertisement

ಆರೋಗ್ಯ ಗಮನಿಸಿ. ಕೆಲಸ ಕಾರ್ಯ ಗಳಲ್ಲಿ ಪ್ರಗತಿಗೆ ಅಡ್ಡಿ ಆತಂಕಗಳು, ವಿಘ್ನ ಅಡಚಣೆ ಆಗದಂತೆ ಸರಿಯಾಗಿ ವಿಚಾರ ಮಾಡಿ ಪ್ರವೃತ್ತರಾಗಿ. ಪರರ ಸಂಪತ್ತನ್ನು ವಿನಿಯೋಗಿಸುವಾಗ ಜಾಗ್ರತೆ ವಹಿಸಿ.

ವೃಷಭ:

ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನ್ಯರ ಮಾತನ್ನು ಅವಲಂಬಿಸು ವಾಗ ನಿಮ್ಮತನವನ್ನು ಕಳೆದುಕೊಳ್ಳದೇ ಕಾರ್ಯ ಪ್ರವೃತ್ತರಾಗಿರಿ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ .

ಮಿಥುನ:

Advertisement

ಮಕ್ಕಳಿಂದ ಸುಖ. ಬಂಧುಜನ ರೊಂದಿಗೆ ವಿಲಾಸ. ಸ್ಥಾನಮಾನ ಪದವಿ ವೃದ್ಧಿ. ಶ್ರೇಯಸ್ಕರ ಕಾರ್ಯಗಳಿಂದ ಜನಮನ್ನಣೆ. ಆಚಾರ ವಿಚಾರಗಳಲ್ಲಿ ತಲ್ಲೀನತೆ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ.

ಕಟಕ:

ದೇವತಾರಾಧನೆಯಿಂದ ನೆಮ್ಮದಿ ಲಭಿಸೀತು. ಅನಾವಶ್ಯಕ ಸಂಚಾರಕ್ಕೆ ಆಸ್ಪದ ನೀಡದಿರಿ. ಅನ್ಯರ ವಿಚಾರದಲ್ಲಿ ಭಾಗಿಯಾಗದಿರಿ. ಆದಷ್ಟು ವಿಶ್ರಾಂತಿ ಪಡೆದು ದೈಹಿಕ ಮಾನಸಿಕ ಸುಖ ಅನುಭವಿಸಲು ಪ್ರಯತ್ನಿಸಿ.

ಸಿಂಹ:

ಆರೋಗ್ಯ ಗಮನಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ಸುಖ ಕಾಣಿರಿ. ಸ್ತ್ರೀ ಪುರುಷರು ಪರಸ್ಪರರ ವಿಚಾರದಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಪ್ರಾಮಾಣಿಕತೆಗೆ ಆದ್ಯತೆ ನೀಡಿ. ಅನಾವಶ್ಯಕ ಸಂಚಾರ ಸಂಭವ.

ಕನ್ಯಾ:

ಆರೋಗ್ಯ ಉತ್ತಮ. ಕುಟುಂಬ ಸುಖ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿಕೆ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನಾರ್ಜನೆ. ಸಾಮಾಜಿಕ ಸುಖ ಪ್ರಾಪ್ತಿಗಾಗಿ ಹಿತೋಕ್ತಿ ಬೋಧನೆ.

ತುಲಾ:

ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ ಗೌರವಾದಿ ಸುಖ. ನಿರಂತರ ಧನಾಗಮನ. ಉದ್ಯೋಗ ವ್ಯವಹಾರದಲ್ಲಿ ಸಹಾಯ ಸಹಕಾರ ಲಭ್ಯ.

ವೃಶ್ಚಿಕ:

ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾಧಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅವಿವಾಹಿತ ರಿಗೆ ಉತ್ತಮ ನೆಂಟಸ್ತಿಕೆ ಒದಗುವ ಕಾಲ. ಅನಿರೀಕ್ಷಿತ ಧನಾಗಮನ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಸಂಪಾದನೆ.

ಧನು:

ಆರೋಗ್ಯದ ಬಗ್ಗ ನಿರ್ಲಕ್ಷ್ಯ ಮಾಡದಿರಿ. ಗುರುಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ.

ಮಕರ:

ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫ‌ಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾಧಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಕುಂಭ:

ಆರೋಗ್ಯ ವೃದ್ಧಿ. ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರ ದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ.

ಮೀನ:

ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಪ್ರಗತಿ. ಧನಾರ್ಜನೆಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ ಸಂಭವ. ಮಕ್ಕಳಿಂದ ಸುವಾರ್ತೆ. ದಂಪತಿಗಳಲ್ಲಿ ಪರಸ್ಪರ ಸುಖ ವೃದ್ಧಿ. ಮನೆಯಲ್ಲಿ ಸಂಭ್ರಮದ ವಾತಾವರಣ.

Advertisement

Udayavani is now on Telegram. Click here to join our channel and stay updated with the latest news.

Next