Advertisement

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:14 AM Jun 30, 2022 | Team Udayavani |

ಮೇಷ:

Advertisement

ದೀರ್ಘ‌ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರು ಹಿರಿಯರ ಆಶೀರ್ವಾದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಗಣ್ಯರ ಭೇಟಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ದಿ.

ವೃಷಭ:

ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ವೃದ್ಧಿ. ದೇವತಾ ಸ್ಥಳ ಸಂದರ್ಶನ.

ಮಿಥುನ:

Advertisement

ಆರೋಗ್ಯದಲ್ಲಿ ಸುಧಾರಣೆ. ಮನೆಯ ಕಡೆ ವಿಶೇಷ ಗಮನಹರಿಸುವಿಕೆ. ಗೃಹೋಪ ವಸ್ತುಗಳ ಸಂಗ್ರಹ. ಮಿತ್ರರ ಭೇಟಿಯಿಂದ ಸಂತಸ ವೃದ್ಧಿ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಧನ ಸಂಪಾದನೆ. ಪಾಲುಗಾರಿಕಾ ವಿಚಾರದಲ್ಲಿ ತಾಳ್ಮೆಯಿರಲಿ.

ಕರ್ಕ:

ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ವಿಳಂಬ ಅಡಚಣೆ ತೋರಿತು. ಧನಾಗಮಕ್ಕೆ ಕೊರತೆಯಾಗದು. ಸಾಂಸಾರಿಕ ಸುಖ ತೃಪ್ತಿದಾ ಯಕ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ.

ಸಿಂಹ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀ ನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಅಭಿವೃದ್ಧಿಯ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರು ಹಿರಿಯರ ವಿಚಾರಗಳಲ್ಲಿ ವಿಶೇಷ ಕಾಳಜಿ ವಹಿಸಿದ ತೃಪ್ತಿ.

ಕನ್ಯಾ:

ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರತೆ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಭೂಮಿ ಆಸ್ತಿ ಪತ್ರ ವ್ಯವಹಾರಗಳಲ್ಲಿ ಜಾಗ್ರತೆಯ ನಡೆ. ಸಾಂಸಾರಿಕ ಸುಖ ತೃಪ್ತಿದಾಯಕ. ಮಕ್ಕಳಿಂದ ವಿಶೇಷ ಸುಖ. ಗುರುಹಿರಿಯರಿಂದ ಪ್ರೋತ್ಸಾಹ.

ತುಲಾ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶ. ಗುರು ಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ವೃಶ್ಚಿಕ:

ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ. ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮ ಸಹಕಾರ.

ಧನು:

ಆರೋಗ್ಯ ಬಗ್ಗೆ ಎಚ್ಚರ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರು ಹಿರಿಯರಿಂದ ಉತ್ತಮ ಮಾರ್ಗದರ್ಶನ.

ಮಕರ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಯೋಗಿ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.

ಕುಂಭ:

ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ. ಇತ್ಯಾದಿ ಶುಭಫ‌ಲ. ತಾಳ್ಮೆ ಸಹನೆಯಿಂದ ವರ್ತಿಸಿ ಗುರಿ ಸಾಧಿಸುವಿರಿ.

ಮೀನ:

ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಫ‌ುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ಮನೆಯಲ್ಲಿ ಬಂಧು ಮಿತ್ರರ ಆಗಮನದಿಂದ ಸಂತಸದ ವಾತಾವರಣ .

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next