Advertisement

Guest Lecturers: 4,055 ಪದವಿಪೂರ್ವ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಸ್ತು

01:39 AM Jun 05, 2023 | Team Udayavani |

ಚಿಕ್ಕಬಳ್ಳಾಪುರ: ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶಿಸಿದ ಬೆನ್ನಲೇ ಈಗ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 4,055 ಉಪನ್ಯಾಸಕರ ಹುದ್ದೆಗಳನ್ನು  ಭರ್ತಿ ಮಾಡುವುದಕ್ಕೆ ಸರಕಾರ ಆದೇಶ ಹೊರಡಿಸಿದೆ.

Advertisement

2023-24ನೇ ಸಾಲಿನಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ಜತೆಗೆ ಭಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರ ಕಾರಣಗಳಿಂದ ತೆರವಾಗಲಿರುವ ಉಪನ್ಯಾಸಕರ ಹುದ್ದೆಗಳ ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಉಪನ್ಯಾಸಕರನ್ನು ಸೇರಿಸಿ ಒಟ್ಟು 4,055 ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರಕಾರ ಹಸುರು ನಿಶಾನೆ ತೋರಿದೆ.

ಷರತ್ತುಗಳೇನು?

ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ. 55ರಷ್ಟು ಅಂಕ ಪಡೆದ ಅಭ್ಯರ್ಥಿಗಳನ್ನು ಮಾತ್ರ ಅತಿಥಿ ಉಪನ್ಯಾಸಕರ ಹುದ್ದೆಗೆ ಪರಿಗಣಿಸುವಂತೆ ಸರಕಾರ ಸೂಚಿಸಿದೆ. ಇವರಿಗೆ ಮಾಸಿಕ 12 ಸಾವಿರ ರೂ. ಗೌರವಧನ ನಿಗದಿಪಡಿಸಿದ್ದು, ವಾರಕ್ಕೆ ಕೇವಲ 10 ತಾಸು ಮಾತ್ರ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ. ಖಾಯಂ ಉಪನ್ಯಾಸಕರ ನೇಮಕಾತಿ ಬೆನ್ನಲ್ಲೇ ಅತಿಥಿ ಉಪನ್ಯಾಸಕರ ಹುದ್ದೆಗಳು ರದ್ದಾಗುತ್ತವೆ. ಆಯಾ ಜಿಲ್ಲೆಯ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಡಿಮೆ ಕಾರ್ಯಭಾರ ಹೊಂದಿರುವ ವಿಷಯಗಳ ಉಪನ್ಯಾಸಕರನ್ನು ಜಿಲ್ಲೆಯ ಇತರ ಸರಕಾರಿ ಪ.ಪೂ. ಕಾಲೇಜುಗಳಲ್ಲಿ ಖಾಲಿ ಹುದ್ದೆಗಳಿಗೆ ನಿಯೋಜಿಸಿದ ಅನಂತರ ಉಳಿಕೆ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಆದೇಶದಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ. ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಲು ಒಬ್ಬರಿಗಿಂತ ಹೆಚ್ಚು ಮಂದಿ ಬಂದಲ್ಲಿ ಆ ಪೈಕಿ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಪರಿಗಣಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಹೆಚ್ಚು  ಹುದ್ದೆಗಳು ಖಾಲಿ!

Advertisement

ಆದೇಶದಲ್ಲಿ 4,055 ಮಂದಿಯ ನೇಮಕಕ್ಕೆ ಅನುಮತಿ ನೀಡಿದ್ದು, ಆ ಪೈಕಿ ದಕ್ಷಿಣ ಕನ್ನಡದಲ್ಲಿ 240, ಉಡುಪಿಯಲ್ಲಿ 200 ಉಪನ್ಯಾಸಕರ ನೇಮಕಕ್ಕೆ ಸೂಚಿಸಲಾಗಿದೆ. ಬಾಗಲಕೋಟೆಯಲ್ಲಿ 190, ಕೋಲಾರ, ಹಾಸನದಲ್ಲಿ ತಲಾ 180, ಬಳ್ಳಾರಿ, ಚಿಕ್ಕಮಗಳೂರು 160, ರಾಮನಗರ, ಚಿಕ್ಕೋಡಿ, ಮೈಸೂರು, ದಾವಣಗೆರೆ ತಲಾ 150, ಕೊಪ್ಪಳ, ಉತ್ತರ ಕನ್ನಡ, ಬೆಳಗಾವಿ ತಲಾ 140, ಮಂಡ್ಯ 130, ರಾಯಚೂರು 120, ವಿಜಯಪುರ, ಮಂಡ್ಯ ತಲಾ 130, ಉಳಿದಂತೆ ಬೆಂಗಳೂರು 80, ಬೆಂಗಳೂರು ದಕ್ಷಿಣ 45, ಬೆಂಗಳೂರು ಗ್ರಾಮಾಂತರ 70, ಬೀದರ್‌ 50, ಚಿತ್ರದುರ್ಗ 70, ಗದಗ 95, ಹಾವೇರಿ 120, ಧಾರವಾಡ 60, ಕಲಬುರಗಿ 110, ಯಾದಗಿರಿ 100, ಚಿಕ್ಕಬಳ್ಳಾಪುರ 100, ಚಾಮರಾಜನಗರ 95 ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರಕಾರ ಆದೇಶಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next