Advertisement

ಧಾರವಾಡದಲ್ಲಿ ಬಿಜೆಪಿ ಸಂಭ್ರಮಾಚರಣೆ

12:53 PM Mar 12, 2017 | Team Udayavani |

ಧಾರವಾಡ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆದು ಎರಡು ರಾಜ್ಯಗಳಲ್ಲಿ ನಿಚ್ಚಳ ಬಹುಮತ ಮತ್ತು ಇನ್ನುಳಿದ ರಾಜ್ಯಗಳನ್ನು ಉತ್ತಮ ಸಾಧನೆ ಮಾಡಿದೆ ಎಂದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ, ಬಣ್ಣ ಎರಚಿ ಸಂಭ್ರಮಾಚರಣೆ ಮಾಡಿದರು. 

Advertisement

ಇಲ್ಲಿನ ಸುಭಾಷ ರಸ್ತೆಯಲ್ಲಿರುವ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಪಕ್ಷ ಬಹುಮತಪಡೆಯುತ್ತಿದ್ದಂತೆಯೇ ಸಂಭ್ರಮಾಚರಣೆ ಆರಂಭಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಸ್ಥಳೀಯ ಮುಖಂಡರು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಎಷ್ಟೆಂಬುದು ದೇಶದಲ್ಲಿ ಮತ್ತೂಮ್ಮೆ ಸಾಬೀತಾಗಿದ್ದು,ವಿರೋಧ ಪಕ್ಷಗಳಿಗೆ ಬಿಜೆಪಿ ಸರಿಯಾಗಿ ಏಟು ಕೊಟ್ಟಂತಾಗಿದೆ. 

ಈ ಜಯ ಬಿಜೆಪಿಗೆ ಆನೆ ಬಲ ತಂದು ಕೊಟ್ಟಿದೆ ಎಂದರು. ಈ ಫಲಿತಾಂಶ ದೇಶದ ಇತರ ರಾಜ್ಯಗಳಲ್ಲಿ ಮುಂದಿನ ವರ್ಷಗಳಲ್ಲಿ ಬರುವ ಚುನಾವಣೆಗೆ ಮುನ್ನುಡಿಯಾಗಿದ್ದು, ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್‌ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಚಾಣಾಕ್ಷತನಕ್ಕೆ ಸಾಕ್ಷಿಯಾಗಿದೆ.

ಅಷ್ಟೇಯಲ್ಲ, ದೇಶದ ಪ್ರಗತಿಗೆ ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳಿಗೆ ಜನರು ನೀಡಿದ ಬೆಂಬಲವೇ ವಿಧಾನಸಭೆ ಚುನಾವಣೆಯಲ್ಲಿನ ಗೆಲುವಾಗಿದೆ ಎಂದು ಅಭಿಪ್ರಾಯಪಟ್ಟರು. ಮಧ್ಯಾಹ್ನದ ವರೆಗೂ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಂದುವರಿದಿತ್ತು. ಪಕ್ಷದ ಮುಖಂಡರು, ಕಾರ್ಯಕರ್ತರು, ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರು, ಅಭಿಮಾನಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next