Advertisement

ಅಫ್ಘಾನಿಸ್ತಾನಲ್ಲಿ ಕಾರ್ ಬಾಂಬ್ ಸ್ಫೋಟ : ಸಾವಿನ ಸಂಖ್ಯೆ 12ಕ್ಕೆ ಏರಿಕೆ

04:44 PM Apr 02, 2022 | Team Udayavani |

ಅಫ್ಘಾನಿಸ್ತಾನ : ಅಫ್ಘಾನಿಸ್ತಾನದ ಪಶ್ಚಿಮ ಪ್ರಾಂತ್ಯದ ಹೆರಾತ್‌ನಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು ಜೊತೆಗೆ 25 ಮಂದಿ ಗಂಭೀರ ಗಾಯಗೊಂಡಿದ್ದಾರೆ.

Advertisement

“ಹೆರಾತ್ ನಗರದ PD 12 ನಲ್ಲಿ ಬಾಂಬ್ ಸ್ಫೋಟಗೊಂಡಿದ್ದು ಪರಿಣಾಮ ಶುಕ್ರವಾರ ಏಳು ಮಂದಿ ಸಾವನ್ನಪ್ಪಿದ್ದರು ಶನಿವಾರ ಸಾವಿನ ಸಂಖ್ಯೆ 12 ಕ್ಕೆ ಏರಿದೆಯಾಗಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೀಡಾ ಮೈದಾನದಲ್ಲಿ ಸ್ಫೋಟಕಗಳನ್ನು ಹೂತು ಇಡಲಾಗಿದ್ದು ಯುವಕರು ಆಟವಾಡುವ ವೇಳೆ ಸ್ಪೋಟಗೊಂಡಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮಾಹಿತಿ ಪ್ರಕಾರ ದಾಳಿಯ ಹೊಣೆಯನ್ನು ಇನ್ನೂ ಯಾವುದೇ ಗುಂಪು ಹೊತ್ತುಕೊಂಡಿಲ್ಲ.

ಕಳೆದ ವರ್ಷ ಆಗಸ್ಟ್‌ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರದಲ್ಲಿ ಲೆಕ್ಕವಿಲ್ಲದಷ್ಟು ದಾಳಿಗಳು ನಡೆದಿವೆ ಎನ್ನಲಾಗಿದೆ.

Advertisement

ಇದನ್ನೂ ಓದಿ : ತಿರುಪತ್ತೂರ್ : ದೇವಸ್ಥಾನಕ್ಕೆ ತೆರಳುತ್ತಿದ್ದ ಟ್ರಕ್ ಉರುಳಿ ಏಳು ಮಂದಿ ಸಾವು

Advertisement

Udayavani is now on Telegram. Click here to join our channel and stay updated with the latest news.

Next