Advertisement

ಮಸ್ಕತ್ : ಏರ್ ಇಂಡಿಯಾ ವಿಮಾನದಲ್ಲಿ ಹೊಗೆ : 14 ಮಂದಿ ಪ್ರಯಾಣಿಕರಿಗೆ ಗಾಯ

03:18 PM Sep 14, 2022 | Team Udayavani |

ಮಸ್ಕತ್ : ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಚ್ಚಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಿಂದ ದಟ್ಟ ಹೊಗೆ ಕಾಣಿಸಿಕೊಂಡು ವಿಮಾನದಲ್ಲಿದ್ದ ಹದಿನಾಲ್ಕು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

Advertisement

ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ವಿಮಾನದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರು ಕೆಳಗಿಳಿಯುವ ಬರದಲ್ಲಿ ಬಿದ್ದು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ವಿಮಾನದಲ್ಲಿ 141 ಪ್ರಯಾಣಿಕರು ಮತ್ತು ಆರು ಮಂದಿ ಸಿಬ್ಬಂದಿಗಳು ಇದ್ದು ಇನ್ನೇನು ಹೊರಡಬೇಕು ಎನ್ನುವಷ್ಟರಲ್ಲಿ ತಾಂತ್ರಿಕ ದೋಷದಿಂದ ದಟ್ಟ ಹೊಗೆ ಆವರಿಸಿಕೊಂಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next