Advertisement

ಅರುಣಾಚಲ ಪ್ರದೇಶದ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ: 200 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ

02:47 PM Oct 25, 2022 | Team Udayavani |

ಇಟಾನಗರ : ಅರುಣಾಚಲದ ರಾಜಧಾನಿ ಇಟಾನಗರ ಸಮೀಪದ ಹಳೆಯ ಮಾರುಕಟ್ಟೆಯಲ್ಲಿ ಮಂಗಳವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿ ಸುಮಾರು 200 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಇದು ರಾಜ್ಯದ ಅತ್ಯಂತ ಹಳೆಯ ಮಾರುಕಟ್ಟೆಯಾಗಿದೆ ಎಂದು ಹೇಳಲಾಗಿದೆ.

Advertisement

ಪಟಾಕಿ ಸಿಡಿಸಿದ್ದರಿಂದ ಅವಘಡ :
ದೀಪಾವಳಿ ಆಚರಣೆಗಾಗಿ ಹಚ್ಚಿದ ಪಟಾಕಿಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ನಡೆದ ಕೂಡಲೆ ಅಗ್ನಿಶಾಮಕ ದಳದವರು ಕಾರ್ಯಪ್ರವೃತ್ತರಾದರು, ಆದರೆ ಅಂಗಡಿಗಳು ಬಿದಿರು ಮತ್ತು ಮರದಿಂದ ಮಾಡಲ್ಪಟ್ಟಿದ್ದರಿಂದ ಬೆಂಕಿ ವೇಗವಾಗಿ ಹರಡಿತು ಎಂದು ಅವರು ಹೇಳಲಾಗಿದೆ.

ಇಟಾನಗರದಿಂದ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿಯನ್ನು ನಂದಿಸಲು ಸಿಬಂದಿಗಳು ಗಂಟೆಗಳ ಕಾಲ ಹರಸಾಹಸಪಡಬೇಕಾಯಿತು. ಬೆಂಕಿ ಅವಘಡದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.

ಅಗ್ನಿಶಾಮಕ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ
ಘಟನೆ ನಡೆದ ಕೂಡಲೇ ಅಗ್ನಿಶಾಮಕ ಠಾಣೆಗೆ ಕರೆ ಮಾಡಿದರೆ ಯಾವುದೇ ಸಿಬ್ಬಂದಿಗಳು ಇರದಿರುವುದು ಬೆಂಕಿ ಅವಘಡ ಹೆಚ್ಚಾಗಲು ಕಾರಣ ಎನ್ನಲಾಗಿದೆ ಬಳಿಕ ಬಂದ ಅಗ್ನಿಶಾಮಕ ವಾಹನ ಸ್ಥಳಕ್ಕೆ ಬಂದರೂ ಅದರಲ್ಲಿ ನೀರು ಇರಲಿಲ್ಲ ಇದರಿಂದ ಕೆರಳಿದ ಸಾರ್ವಜನಿಕರು ಅಗ್ನಿಶಾಮಕ ಸಿಬ್ಬಂದಿಗಳ ಕಾರ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಗಂಡನಿಂದ ಜೀವಂತ ಸಮಾಧಿ ಆದಾಕೆ ಆ್ಯಪಲ್ ವಾಚ್‌ ನಿಂದ ಬದುಕಿ ಬಂದಳು.!

Advertisement
Advertisement

Udayavani is now on Telegram. Click here to join our channel and stay updated with the latest news.

Next