Advertisement

Beijing ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 21 ಮಂದಿ ಮೃತ್ಯು, ಹಲವರು ಗಂಭೀರ

09:41 PM Apr 18, 2023 | Team Udayavani |

ಬೀಜಿಂಗ್: ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿರುವ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 21 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಬೀಜಿಂಗ್ ನ ಚಾಂಗ್‌ಫೆಂಗ್ ಆಸ್ಪತ್ರೆಯ ಪೂರ್ವ ವಿಭಾಗದಲ್ಲಿ ಮಧ್ಯಾಹ್ನ 12:57 ರ ಸುಮಾರಿಗೆ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಈ ವೇಳೆ ಘಟನಾ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಆಸ್ಪತ್ರೆಯೊಳಗೆ ಗಂಭೀರ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದೆ ಆದರೆ ಸಂಜೆಯ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ೨೧ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಲ್ಲದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 71 ರೋಗಿಗಳನ್ನು ರಕ್ಷಣಾ ತಂಡ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ ಎಂದು ವರದಿ ತಿಳಿಸಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಇದನ್ನೂ ಓದಿ: Karnataka Poll: ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ

Advertisement
Advertisement

Udayavani is now on Telegram. Click here to join our channel and stay updated with the latest news.

Next