ವಾಷಿಂಗ್ಟನ್:ಅಮೆರಿಕಾದಲ್ಲಿ ಗುಂಡಿನ ದಾಳಿಯ ಸಾಮೂಹಿಕ ಹತ್ಯೆ ಮುಂದುವರಿದಿದ್ದು, ಗುರುವಾರ (ಜೂನ್ 09) ಉತ್ತರ ಮೇರಿಲ್ಯಾಂಡ್ ನ ಉತ್ಪಾದನಾ ಘಟಕವೊಂದರಲ್ಲಿ ಬಂದೂಕುಧಾರಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ಮೇರಿಲ್ಯಾಂಡ್ ಕೌಂಟಿ ಷರೀಫ್ ತಿಳಿಸಿದ್ದಾರೆ.
ಇದನ್ನೂ ಓದಿ:ನೂಪುರ್ ಶರ್ಮಾರ ಪ್ರತಿಕೃತಿಗೆ ಬೆಳಗಾವಿಯ ನಡುರಸ್ತೆಯಲ್ಲಿ ಗಲ್ಲು: ಹಿಂದೂ ಸಂಘಟನೆಗಳ ಆಕ್ರೋಶ
ಗುಂಡಿನ ದಾಳಿಯಲ್ಲಿ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದ, ಚಿಂತಾಜನಕ ಸ್ಥಿತಿಯಲ್ಲಿರುವುದಾಗಿ ವರದಿ ಹೇಳಿದೆ. ಭದ್ರತಾ ಸಿಬ್ಬಂದಿಯ ಪ್ರತಿದಾಳಿಯಲ್ಲಿ ಗಾಯಗೊಂಡಿರುವ ದುಷ್ಕರ್ಮಿಯನ್ನು ವಶಕ್ಕೆ ಪಡೆಯಲಾಗಿದೆ. ಆತನ ಗುರುತನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ ಎಂದು ಷರೀಫ್ ತಿಳಿಸಿರುವುದಾಗಿ ವರದಿಯಾಗಿದೆ.
ಪ್ರತಿದಾಳಿಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ದುಷ್ಕರ್ಮಿ ಗಾಯಗೊಂಡಿದ್ದು ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಾಷಿಂಗ್ಟನ್ ಕೌಂಟಿಯ ಷರೀಫ್ ತಿಳಿಸಿದ್ದಾರೆ. ದಾಳಿಯ ಹಿಂದೆ ಯಾವುದೇ ಒಂದು ಸಮುದಾಯದ ಕೈವಾಡ ಇಲ್ಲ ಎಂದು ವರದಿ ತಿಳಿಸಿದೆ.
ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಆದರೆ ಘಟನೆ ನಡೆದ ಸಂದರ್ಭದಲ್ಲಿ ಎಷ್ಟು ಮಂದಿ ಉದ್ಯೋಗಿಗಳು ಹಾಜರಿದ್ದರು ಎಂಬುದು ಸ್ಪಷ್ಟವಾಗಿಲ್ಲ ಎಂದು ಕೊಲಂಬಿಯಾ ವಕ್ತಾರೊಬ್ಬರು ತಿಳಿಸಿದ್ದಾರೆ.