ಪುಣೆ: ಮಹಾರಾಷ್ಟ್ರದ ಪುಣೆಯ ಪಿಂಪ್ರಿ-ಚಿಂಚ್‌ವಾಡ್ ಪ್ರದೇಶದಲ್ಲಿ ಕ್ಯಾಂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 2.45 ರ ಸುಮಾರಿಗೆ ತಲವಾಡೆಯಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದೆ ಎಂದು ಪಿಂಪ್ರಿ–ಚಿಂಚ್‌ವಾಡ್ ಪುರಸಭೆಯ ಆಯುಕ್ತ ಶೇಖರ್ ಸಿಂಗ್ ತಿಳಿಸಿದ್ದಾರೆ.
ಕಾರ್ಖಾನೆಯು ಸ್ಪಾರ್ಕ್ಲಿಂಗ್ ಕ್ಯಾಂಡಲ್ ಗಳನ್ನು ತಯಾರಿಸುತ್ತದೆ. ಇದನ್ನು ಸಾಮಾನ್ಯವಾಗಿ ಹುಟ್ಟುಹಬ್ಬದ ಆಚರಣೆಗೆ ಬಳಸಲಾಗುತ್ತದೆ ಎಂದು ಅವರು ಹೇಳಿದರು.
ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಶೇಖರ್ ಸಿಂಗ್ ಅವರು ತಿಳಿಸಿದರು.
ಗಾಯಾಳುಗಳನ್ನು ಪುಣೆ ಮತ್ತು ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.