ನವದೆಹಲಿ: ನರೇಂದ್ರ ಮೋದಿ ಅವರನ್ನು 18ನೇ ಲೋಕಸಭೆಯ ಸಂಸದೀಯ ನಾಯಕನನ್ನಾಗಿ ಎನ್ ಡಿಎ ಸಂಸದರು ಶುಕ್ರವಾರ (ಜೂನ್ 07) ಆಯ್ಕೆ ಮಾಡುವ ಮೂಲಕ ಮೂರನೇ ಬಾರಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿದಂತಾಗಿದೆ.
ಇದನ್ನೂ ಓದಿ:Saurabh Netravalkar ಪಾಕ್ ತಂಡಕ್ಕೆ ಸೋಲಿನ ರುಚಿತೋರಿಸಿದ ಭಾರತೀಯ ಸಾಫ್ಟ್’ವೇರ್ ಇಂಜಿನಿಯರ್
ಎನ್ ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿರುವುದಕ್ಕೆ ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಬಹಿರಂಗವಾಗಿ ಒಪ್ಪಿಕೊಂಡಂತಾಗಿದೆ.
ಶುಕ್ರವಾರ ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಎನ್ ಡಿಎ ಮೈತ್ರಿಕೂಟದ ಸಂಸದರು ಒಮ್ಮತದ ನಿರ್ಧಾರದಿಂದ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿದ್ದರು.
ಇಂದು ಭಾರತಕ್ಕೆ ಸೂಕ್ತ ಸಮಯದಲ್ಲಿ ಸಮರ್ಪಕ ನಾಯಕ ಸಿಕ್ಕಂತಾಗಿದೆ. ಮೋದಿ ಅವರ ನಾಯಕತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ಭಾರತ ಜಗತ್ತಿನ 1 ಅಥವಾ 2ನೇ ಅತೀ ದೊಡ್ಡ ಆರ್ಥಿಕತೆ ದೇಶವಾಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸ ಇರುವುದಾಗಿ ಚಂದ್ರಬಾಬು ನಾಯ್ದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿತೀಶ್ ಕುಮಾರ್, ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮ್ಮ ಪಕ್ಷ ಎಲ್ಲಾ ಸಂದರ್ಭದಲ್ಲೂ ಪ್ರಧಾನಿ ಮೋದಿ ಜತೆಗಿರಲಿದೆ ಎಂದು ಭರವಸೆ ನೀಡಿದರು.