Advertisement

ಏಕಕಾಲದಲ್ಲಿ ಚುನಾವಣೆ ಪರ ಕೇಂದ್ರ ಬ್ಯಾಟಿಂಗ್‌

10:23 PM Mar 17, 2023 | Team Udayavani |

ನವದೆಹಲಿ: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದ ಪರ ಕೇಂದ್ರ ಸರ್ಕಾರ ಮತ್ತೊಮ್ಮೆ ಬ್ಯಾಟಿಂಗ್‌ ಮಾಡಿದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಹಣ ಉಳಿತಾಯವಾಗಲಿದೆ. ಸಂವಿಧಾನದಲ್ಲಿ ತಿದ್ದುಪಡಿ ತರುವ ಮೊದಲು, ಎಲ್ಲಾ ರಾಜಕೀಯ ಪಕ್ಷಗಳನ್ನು ಒಳಗೊಂಡಂತೆ ಅದರ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಶುಕ್ರವಾರ ಹೇಳಿದೆ.

Advertisement

ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು, “ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಸಂಸದೀಯ ಸಮಿತಿಯು ಚುನಾವಣಾ ಆಯೋಗ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿದೆ. ಈ ನಿಟ್ಟಿನಲ್ಲಿ ಸಮಿತಿಯು ಒಂದಷ್ಟು ಶಿಫಾರಸುಗಳನ್ನು ಮಾಡಿದೆ,’ ಎಂದಿದ್ದಾರೆ.

“ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ಪ್ರಾಯೋಗಿಕ ಅಂಶಗಳ ಕುರಿತು ಪರೀಕ್ಷೆಗೆ ಇದನ್ನು ಕಾನೂನು ಆಯೋಗಕ್ಕೆ ಕಳುಹಿಸಲಾಗಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ ಸಾರ್ವಜನಿಕ ಹಣ ಉಳಿತಾಯ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಇಲಾಖೆಗಳ ಶ್ರಮ ತಗ್ಗಲಿದೆ.

ಅಲ್ಲದೇ ಚುನಾವಣೆ ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಮಾಡುವ ವೆಚ್ಚದಲ್ಲಿ ಉಳಿತಾಯವಾಗಲಿದೆ,’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next