ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರ “ಅಥಿ ಐ ಲವ್’ ಯು ಚಿತ್ರೀಕರಣದಲ್ಲಿ ಬಿಝಿಯಾಗಿದೆ. ಇತ್ತೀಚೆಗೆ ಚಿತ್ರದ ಹನ್ನೊಂದು ನಿಮಿಷದ ದೃಶ್ಯವೊಂದನ್ನು ಸಿಂಗಲ್ ಶಾಟ್‌ನಲ್ಲಿ ಚಿತ್ರೀಕರಿಸಲಾಗಿದೆ.
ಒಂದೇ ದಿನದಲ್ಲಿ, ಒಂದು ಮನೆಯಲ್ಲಿ ನಡೆಯುವ ಕತೆ ಈ ಚಿತ್ರದಲ್ಲಿದೆ. ಗಂಡ-ಹೆಂಡತಿಯ ನಡುವಿನ ಆಪ್ತ ದೃಶ್ಯಗಳು ಇಲ್ಲಿ ಪ್ರಮುಖವಾಗಿದ್ದು, ಅದನ್ನು ಸಿಂಗಲ್ ಶಾಟ್‌ನಲ್ಲಿ ಚಿತ್ರೀಕರಿಸಿದೆ ಚಿತ್ರತಂಡ. ಮನೆಯಲ್ಲೇ ವಿವಿಧ ಕೋನಗಳಲ್ಲಿ ಲೈಟಿಂಗ್ ವ್ಯವಸ್ಥೆ ರೂಪಿಸಿ, ಕ್ಯಾಮೆರಾ ಚಲನೆಗೆ ಪ್ಲಾನ್ ಮಾಡಲಾಗಿತ್ತು. ಅಂದುಕೊಂಡಂತೇ ಈ ದೃಶ್ಯ ಮೂಡಿಬಂದಿದ್ದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ. ಈ ರೀತಿಯ ದೀರ್ಘಾವಧಿಯ ದೃಶ್ಯಗಳು ಚಿತ್ರದುದ್ದಕ್ಕೂ ಮೂಡಿ ಬರಲಿದೆಯಂತೆ.
ಭಾವನಾತ್ಮಕ ದೃಶ್ಯಗಳನ್ನು ಅಲ್ಲಲ್ಲಿ ಕಟ್ ಮಾಡಿ ವಿಭಾಗಿಸಿದರೆ, ಭಾವನೆಗಳನ್ನು ಹಿಡಿದಿಡುವುದು ಕಷ್ಟ. ಹಾಗಾಗಿ, ಕೆಲವು ದೃಶ್ಯಗಳನ್ನು ಒಂದೊಂದೇ ಶಾಟ್‌ಗಳಲ್ಲಿ ಚಿತ್ರಿಸಿದ್ದೇವೆ. ಅದು ಪ್ರೇಕ್ಷಕರಿಗೆ ಮತ್ತಷ್ಟು ಹಿತವೆನಿಸುತ್ತವೆಎನ್ನುವುದು ನಿರ್ದೇಶಕ ಲೋಕೇಂದ್ರ ಸೂರ್ಯ ಅವರ ಮಾತು. ಚಿತ್ರದಲ್ಲಿ ಶ್ರಾವ್ಯಾ ನಾಯಕಿಯಾಗಿ ನಟಿಸಿದ್ದಾರೆ