Advertisement

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

09:16 AM Sep 21, 2024 | Team Udayavani |

ಹೊಸದಿಲ್ಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್‌ ಆದ್ಮಿ ಪಕ್ಷ (Aam Admi Party)ದ ಆತಿಶಿ (Atishi) ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Advertisement

ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಬೋಧನೆ ಕಾರ್ಯಕ್ರಮ ನಡೆಯಲಿದೆ ಎಂದು ವರದಿ ಹೇಳಿದೆ.

ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ ನಾಯಕ ಮುಖೇಶ್ ಅಹ್ಲಾವತ್ ಅವರು ದಿಲ್ಲಿ ಕ್ಯಾಬಿನೆಟ್‌ಗೆ ಹೊಸದಾಗಿ ಪ್ರವೇಶಿಸುತ್ತಿದ್ದಾರೆ. ಸುಲ್ತಾನ್‌ಪುರ ಮಜ್ರಾದಿಂದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ನೂತನ ಸಚಿವ ಸಂಪುಟದಲ್ಲಿ ಖಾತೆಗಳ ಬದಲಾವಣೆ ಆಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ನಿರ್ಗಮಿತ ಕೇಜ್ರಿವಾಲ್ ಸರ್ಕಾರದಲ್ಲಿ ಅತಿಶಿ ಅವರು ಹಣಕಾಸು, ಕಂದಾಯ, ಲೋಕೋಪಯೋಗಿ, ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ 13 ಪ್ರಮುಖ ಖಾತೆಗಳನ್ನು ಹೊಂದಿದ್ದರು.

Advertisement

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅರವಿಂದ ಕೇಜ್ರಿವಾಲ್‌ ಅವರು ಜಾಮೀನಿನ ಮೇಲೆ ಹೊರಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆತಿಶಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.

ಜನರಿಂದ ಆಯ್ಕೆಯಾಗುವವರೆಗೆ ಮತ್ತೆ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲಾರೆ ಎಂದು ಅರವಿಂದ ಕೇಜ್ರಿವಾಲ್‌ ಘೋಷಿಸಿದ್ದಾರೆ. ಮುಂದಿನ (2025) ಫೆಬ್ರವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next