Advertisement

ATM Robbery: ರಾತ್ರೋ ರಾತ್ರಿ ಗ್ಯಾಸ್ ಕಟ್ಟರ್ ಬಳಸಿ ಎಟಿಎಂನಲ್ಲಿದ್ದ 14 ಲಕ್ಷ ಹಣ ಲೂಟಿ

03:16 PM Aug 16, 2023 | Team Udayavani |

ಚಿಕ್ಕಮಗಳೂರು: ಗ್ಯಾಸ್ ಕಟ್ಟರ್ ಬಳಸಿ ಎಟಿಎಂನಲ್ಲಿದ್ದ 14 ಲಕ್ಷ ಹಣ ಲೂಟಿ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಮಂಗಳವಾರ ರಾತ್ರಿ ಬೆಳಕಿಗೆ ಬಂದಿದೆ.

Advertisement

ನಗರದ ಹೌಸಿಂಗ್ ಬೋರ್ಡ್ ಬಳಿಯಿರುವ ಕೆನರಾ ಬ್ಯಾಂಕಿನ ಎಟಿಎಂ ಮೆಚಿನ್ ಅನ್ನು ಕಳ್ಳರು ಗ್ಯಾಸ್ ಕಟ್ಟರ್ ಬಳಸಿ ಅದರೊಳಗಿದ್ದ ಸುಮಾರು ಹದಿನಾಲ್ಕು ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ.

ಕಳ್ಳತನ ನಡೆಸುವ ಮೊದಲು ಕಳ್ಳರು ಸಿಸಿ ಕ್ಯಾಮೆರಾವನ್ನು ನಿಷ್ಕ್ರಿಯಗೊಳಿಸಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು ಘಟನಾ ಸ್ಥಳಕ್ಕೆ ಬ್ಯಾಂಕ್ ಅಧಿಕಾರಿಗಳು ಹಾಗೂ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Hospitalised: ಉಪಹಾರ ಸೇವಿಸಿದ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Advertisement

Udayavani is now on Telegram. Click here to join our channel and stay updated with the latest news.

Next