Advertisement

ಒಂದು ಜಿಲ್ಲೆ ಒಂದು ಬೆಳೆಯಡಿ ಮಾವು ಆಯ್ಕೆ: ನಿತೇಶ

11:41 AM Aug 01, 2020 | Suhan S |

ಧಾರವಾಡ: ಆತ್ಮ ನಿರ್ಭರ ಅಭಿಯಾನದ ಭಾಗವಾಗಿ ಸೂಕ್ಷ್ಮ ಮತ್ತು ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪೊÅàತ್ಸಾಹಿಸಲು ರಾಜ್ಯ ಸರಕಾರದ ಸಹಯೋಗದಲ್ಲಿ ಕೇಂದ್ರ ಸರಕಾರ ಆರಂಭಿಸಿರುವ ಪಿಎಂಎಫ್‌ಎಂಎಫ್‌ ಯೋಜನೆಗೆ ಜಿಲ್ಲೆಯಿಂದ ಒಂದು ಜಿಲ್ಲೆ ಒಂದು ಬೆಳೆ ಕಾರ್ಯಕ್ರಮದಡಿ ಮಾವು ಬೆಳೆ ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿಯ ಅಧ್ಯಕ್ಷರಾದ ಡಿಸಿ ನಿತೇಶ ಪಾಟೀಲ ಹೇಳಿದರು.

Advertisement

ನಗರದ ಡಿಸಿ ಕಚೇರಿಯ ನೂತನ ಸಭಾಂಗಣದಲ್ಲಿ ಜರುಗಿದ ಆತ್ಮ ನಿರ್ಭರ ಅಭಿಯಾನದ ಪಿಎಂಎಫ್‌ ಎಂಎಫ್‌ (Scheme for formalization of micro food Processing Enterprises) ಕಾರ್ಯಕ್ರಮದ ಒಂದು ಜಿಲ್ಲೆ ಒಂದು ಉತ್ಪನ್ನ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಎರಡನೇಯ ಬೆಳೆ ಶಿಫಾರಸಿಗಾಗಿ ಮೆಣಸಿನಕಾಯಿ ಸೇರಿಸಲು ಸಮಿತಿ ಉತ್ಸಾಹ ತೋರಿದೆ ಎಂದರು.

ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ, ಅವುಗಳ ಸ್ಪರ್ಧಾತ್ಮಕತೆ ಹೆಚ್ಚಿಸುವುದು, ಅವುಗಳನ್ನು ಸಂಘಟಿತ ವಲಯಕ್ಕೆ ಒಳಪಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಮತ್ತು ಉತ್ಪಾದಕ ಸಹಕಾರಿ ಸಂಘಗಳನ್ನು ಆಹಾರ ಸಂಸ್ಕರಣ ಉದ್ದಿಮೆಗಳೊಂದಿಗೆ ಬೆಸೆಯುವುದು ಪಿಎಂಎಫ್‌ಎಂಎಫ್‌ ಯೋಜನೆಯ ಪ್ರಮುಖ ಉದ್ದೇಶ ಎಂದರು.

ಸಮಿತಿ ಉಪಾಧ್ಯಕ್ಷ ಜಿಪಂ ಸಿಇಒ ಡಾ| ಬಿ.ಸಿ.ಸತೀಶ ಮಾತನಾಡಿ, ಜಿಲ್ಲೆಯ ಮಾವು ಬೆಳೆಯೊಂದಿಗೆ ಈರುಳ್ಳಿ, ಹೆಸರು, ಮೆಣಸಿನಕಾಯಿ, ಜೋಳ, ಮೆಕ್ಕೆಜೋಳ ಬೆಳೆಯುತ್ತಾರೆ. ಆದರೆ ಮಾವು ಉತ್ಪನ್ನವೂ ಕಾಲ ಮಿತಿಯಲ್ಲಿ ಬಳಕೆಯಾಗಬೇಕು ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ.ಐ.ಬಿ. ಪ್ರಾಸ್ತಾವಿಕ ಮಾತನಾಡಿದರು. ಸಮಿತಿ ಸದಸ್ಯರಾದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮೋಹನ ಭರಮಕ್ಕನವರ, ತೋಟಗಾರಿಕೆ ಇಲಾಖೆ ಪ್ರಭಾರಿ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಸೇರಿದಂತೆ ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿ ಗಳು ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಕೆ. ಈಶ್ವರನಾಥ, ನರ್ಬಾಡ್‌ ಜಿಲ್ಲಾ ವ್ಯವಸ್ಥಾಪಕ ಮಯೂರ ಕಾಂಬಳೆ, ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಮಂಜುನಾಥ ಹೂಗಾರ, ರೈತ ಉತ್ಪಾದಕ ಸಂಸ್ಥೆಗಳ ಮುಖ್ಯಸ್ಥ ಅಶೋಕ ದೊಡವಾಡ, ಪರಮೇಶ್ವರ, ಚನ್ನಬಸಯ್ಯ ಹುಬ್ಬಳ್ಳಿ, ಬಸವರಾಜ ತಾಮ್ರಗುಂಡ, ನಾರಾಯಣ ಯಲಿಗಾರ ಸೇರಿದಂತೆ ನೀರಾವರಿ, ಲೋಕೋಪಯೋಗಿ, ಪಶುಸಂಗೋಪನೆ, ಹೆಸ್ಕಾಂ, ಸಾರಿಗೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

ಜಿಲ್ಲೆಯಲ್ಲಿ ಸುಮಾರು 8734 ಹೆಕ್ಟೆರ್‌ ಪ್ರದೇಶದಲ್ಲಿ ಮಾವು ಬೆಳೆ ಇದ್ದು, ಮುಖ್ಯವಾಗಿ ಆಪೂಸ್‌, ಕೇಸರ, ಪೈರಿ, ಮಲ್ಲಿಕಾ ತಳಿಗಳನ್ನು ಬೆಳೆಯಲಾಗುತ್ತದೆ. ಪ್ರತಿ ವರ್ಷ ಸುಮಾರು 77,458 ಮೆಟ್ರಿಕ್‌ ಟನ್‌ ಮಾವು ಉತ್ಪಾದನೆ ಇದೆ. ಮಾವು ಬೆಳೆಗಾರರು, ಮಾರಾಟಗಾರರು, ಸಂಸ್ಕರಿಸಿ ಮಾವಿನ ಉಪ ಉತ್ಪನ್ನಗಳನ್ನು ತಯಾರಿಸುವರನ್ನು ಒಂದು ಗುಂಪು ಮಾಡಿ ಅವರ ಕಾರ್ಯಗಳಿಗೆ ಪ್ರೋತ್ಸಾಹ ನೀಡುವುದು. ಈ ಮೂಲಕ ಸ್ಥಳಿಯವಾಗಿ ಹೆಚ್ಚು ಉದ್ಯೋಗ ಸೃಷ್ಟಿಸಿ, ವೈಜ್ಞಾನಿಕವಾಗಿ ಸಂಸ್ಕರಣೆ, ಪ್ಯಾಕ್‌ ಮಾಡುವುದು, ರಫ್ತು, ಮಾರಾಟಕ್ಕೆ ಉತ್ತೇಜಿಸುವುದು ನಮ್ಮ ಆದ್ಯತೆ. –ನಿತೇಶ ಪಾಟೀಲ, ಡಿಸಿ, ಧಾರವಾಡ

Advertisement

Udayavani is now on Telegram. Click here to join our channel and stay updated with the latest news.

Next