Advertisement

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾ: ಫಲಾನುಭವಿಗಳೊಂದಿಗೆ ಮೋದಿ ಸಂವಾದ

02:31 PM Oct 21, 2021 | Team Udayavani |

ಪಣಜಿ: ಆತ್ಮ ನಿರ್ಭರ ಭಾರತ್ ಸ್ವಯಂಪೂರ್ಣ ಗೋವಾ ಈ ಸಂಕಲ್ಪದ ಅಡಿಯಲ್ಲಿ ಕಳೆದ ವರ್ಷ ಲಾಭ ಪಡೆದ ಜನತೆಯ ಬಳಿ ಮಾಹಿತಿ ಪಡೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಗೋವಾದ ಸ್ವಯಂಸೇವಕರು ಮತ್ತು ಜನತೆಯೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮ ಎಲ್ಲ ಪಂಚಾಯತಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನತೆ ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.

Advertisement

ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಪ್ರಮೋದ ಸಾವಂತ್-ಪ್ರಧಾನಿ ನರೇಂದ್ರ ಮೋದಿಯವರು ಅಂದು 7 ಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಒಬ್ಬ ಸ್ವಯಂಪೂರ್ಣ ಮಿತ್ರ ಹಾಗೂ ಈ ಯೋಜನೆಗಳ ಲಾಭಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಇದನ್ನೂ ಓದಿ:ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ

2020 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಅಭಿಯಾನವನ್ನು ಆರಂಭಿಸಿದ ನಂತರ ರಾಜ್ಯದಲ್ಲಿನ 191 ಪಂಚಾಯತಿಗಳಲ್ಲಿ ಹಾಗೂ 14 ಪಾಲಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳನ್ನು ಸ್ವಯಂಪೂರ್ಣ ಮಿತ್ರ ಎಂದು ನಿಯುಕ್ತಿಗೊಳಿಸಲಾಗಿದೆ. 12 ತಾಲೂಕುಗಳಲ್ಲಿ ನೋಡಲ್ ಅಧಿಕಾರಿಗಳನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next