ಬೆಂಗಳೂರು: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ. ಇವರ ಅನಾರೋಗ್ಯವನ್ನೂ ಲೆಕ್ಕಿಸದೆ, ಹಳೆ ಸುಳ್ಳು ಕೇಸ್ ಆಧರಿಸಿ, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಅಧಿಕೃತ ಟ್ಟಿಟ್ಟರ್ ಹ್ಯಾಂಡಲ್ ನಲ್ಲಿಯೂ ಟ್ವೀಟ್ ಮಾಡಲಾಗಿದೆ.
ಇದನ್ನೂ ಓದಿ:ಅಶೋಕ್ ಪಿಎ ವಿರುದ್ಧ ಲಂಚದ ಆರೋಪ ಮಾಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅಮಾನತು
ಬಿಜೆಪಿ ಸರ್ಕಾರದಲ್ಲಿ ಪೊಲೀಸರು ಬಿಜೆಪಿ ನಾಯಕರ ಅಣತಿಯಂತೆ ಕೆಲಸ ಮಾಡುತ್ತಿರುವುದು ಸ್ಪಷ್ಟ. ಬಿಜೆಪಿ ಕುಮ್ಮಕ್ಕಿನಿಂದ ಕಾರ್ಕಳದ ನಮ್ಮ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ. ಅನಾರೋಗ್ಯವನ್ನೂ ಲೆಕ್ಕಿಸದೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪೊಲೀಸರನ್ನು ಕೊಡಲೇ ಅಮಾನತುಗೊಳಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಆಗ್ರಹಿಸಿದೆ.
ಯೋಧರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬರೆದ ಬರಹಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ರಾಧಾಕೃಷ್ಣ ಹಿರ್ಗಾನ ಎಂಬವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ಆದರೆ ಬಳಿಕ ರಾಧಾಕೃಷ್ಣ ಹಿರ್ಗಾನ ಆಸ್ಪತ್ರೆಗೆ ದಾಖಲಾಗಿದ್ದು, ಇದಕ್ಕೆ ಪೊಲೀಸರ ದೌರ್ಜನ್ಯವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.