Advertisement

High Court: ದಲಿತರ ಮೇಲೆ ದೌರ್ಜನ್ಯ; 10 ಮಂದಿಗೆ ಜೈಲು ಶಿಕ್ಷೆ

10:48 AM Nov 19, 2023 | Team Udayavani |

ಬೆಂಗಳೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂಡ ಗ್ರಾಮದಲ್ಲಿ ದಲಿತರ ಮೇಲಿನ ಹಲ್ಲೆ ನಡೆಸಿದ್ದ ಪ್ರಕರಣಕಕ್ಕೆ ಸಂಬಂಧಿಸಿದಂತೆ 10 ಮಂದಿ ಅಪರಾಧಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 3 ಸಾವಿರ ರೂ.ಗಳ ದಂಡ ವಿಧಿಸಿ ಹೈಕೋರ್ಟ್‌ ಆದೇಶಿಸಿದೆ.

Advertisement

ಆರೋಪಿಗಳನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾ ಲಯದ ಆದೇಶ ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆ ಲಕ್ಷ್ಮಮ್ಮ ಎಂಬುವರು ಸಲ್ಲಿ ಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಜೆ. ಎಂ. ಖಾಜೀ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡ (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಎಲ್ಲ ಅಪರಾಧಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು  ದಂಡ ವಿಧಿಸಿದೆ. ಜತೆಗೆ, ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಮಾಡಲಾದ ಅಪರಾಧಿ‌ಗಳಿಗೆ ವಿವಿಧ ಹಂತದ (ತಿಂಗಳುಗಳಲ್ಲಿ) ಶಿಕ್ಷೆ ವಿಧಿಸಿ ಒಟ್ಟು 85 ಸಾವಿರ ರೂ.ಗಳ ದಂಡ ವಿಧಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಕ್ಲಿಫ್ಟನ್‌ ರೊಜಾರಿಯೊ, ಮೈತ್ರಿಯೆ ಕೃಷ್ಣನ್‌ ವಾದಿಸಿದರು.

ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳನ್ನು ಪರಿಶೀಲನೆ ನಡೆಸದೆ ವಿಚಾರಣಾ ನ್ಯಾಯಾಲಯವು ಪ್ರಾಸಿಕ್ಯೂ ಷನ್‌ ಸಾಕ್ಷ್ಯಾಧಾರಗಳು ಅನುಮಾನಾಸ್ಪಾದ ಆಗಿವೆ ಎಂದು ಹೇಳಿ ಅಪರಾಧಿಗಳನ್ನು ಖುಲಾಸೆಗೊಳಿಸಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪ್ರಕರಣದ 8ನೇ ಆರೋಪಿ ಶಿವಲಿಂಗಯ್ಯ ಎಂಬುವರು ಅರ್ಜಿ ವಿಚಾರಣೆ ನಡುವೆ ಮೃತಪಟ್ಟಿರುವುದರಿಂದ ಅವರ ವಿರುದ್ಧದ ಪ್ರಕರಣ ಹಿಂಪಡೆಯಲಾಗಿದೆ.

Advertisement

ಏನಿದು ಪ್ರಕರಣ?:

ಸಿವಿಲ್‌ ಪ್ರಕರಣವೊಂದಕ್ಕೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಸುದೀಪ್‌ ಎಂಬುವರ ವಿರುದ್ಧ ಲಕ್ಷಮ್ಮ ದೂರು ನೀಡುವುದಕ್ಕೆ ಪೊಲೀಸ್‌ ಠಾಣೆಗೆ ಹೋಗಿದ್ದರು. ಇದರಿಂದ ಸಿಟ್ಟಾಗಿದ್ದ ಗ್ರಾಮದ ಸವರ್ಣಿಯರು 2008ರ ಆಗಸ್ಟ್‌ 14ರಂದು ದುಂದ ಗ್ರಾಮದ ದಲಿತರ ಕಾಲೋನಿಗೆ ನುಗ್ಗಿ ತಮ್ಮ ಜಾತಿಯನ್ನು ಪ್ರಸ್ತಾಪಿಸಿ ನಿಂದಿಸಿದ್ದಾರೆ. ಜತೆಗೆ, ದೊಣ್ಣೆಗಳು ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಿ ರಕ್ತ ಸ್ರಾವವಾಗುವರೆಗೆ ಗಾಯಗೊಳಿಸಿದ್ದಾರೆ ಎಂದು ಲಕ್ಷ್ಮಮ್ಮ ದೂರು ನೀಡಿದ್ದರು.  ಈ ದೂರಿನ ಸಂಬಂಧ ದಂಡಿನಶಿವರ ಪೊಲೀಸರು ತನಿಖೆ ನಡೆಸಿ 11 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ತುಮಕೂರಿನ ವಿಚಾರಣಾ ನ್ಯಾಯಾಲಯ 2011ರ ಜೂನ್‌ 23ರಂದು ಆರೋಪ ಸಾಬೀತು ಪಡಿಸಲು ಪ್ರಾಸಿಕ್ಯೂಷನ್‌ ವಿಫ‌ಲವಾಗಿದೆ ಎಂದು ತಿಳಿಸಿ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಾಸಿಕ್ಯೂಷನ್‌ ಪ್ರಶ್ನೆ ಮಾಡಿರಲಿಲ್ಲ. ಬಳಿಕ ಸಂತ್ರಸ್ತೆ ಲಕ್ಷ್ಮಮ್ಮ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next