Advertisement
ಮಂಗಳವಾರ ಮುಂಬಯಿನ ವಿಶೇಷ ಎನ್‌ಐಎ ಕೋರ್ಟ್ ಮುಂದೆ ಹಾಜರಾದ ಸಾಕ್ಷಿಯು, “ಆಗಿನ ಹಿರಿಯ ಎಟಿಎಸ್ ಅಧಿಕಾರಿಯಾಗಿದ್ದ ಪರಂಬೀರ್ ಸಿಂಗ್ ಮತ್ತು ಇನ್ನೊಬ್ಬ ಅಧಿಕಾರಿಯು ನನಗೆ ಚಿತ್ರಹಿಂಸೆ ನೀಡಿದ್ದರು. ಯೋಗಿ ಆದಿತ್ಯನಾಥ್, ಇಂದ್ರೇಶ್ ಕುಮಾರ್ ಸೇರಿದಂತೆ ನಾಲ್ವರು ಆರೆಸ್ಸೆಸ್ ನಾಯಕರ ಹೆಸರು ಹೇಳುವಂತೆ ಒತ್ತಡ ಹೇರಿದ್ದರು’ ಎಂದು ಹೇಳಿದ್ದಾರೆ. ಮಾಲೇಗಾಂವ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸುವ ಮುನ್ನ ಅದರ ತನಿಖೆಯನ್ನು ಮಹಾರಾಷ್ಟ್ರ ಎಟಿಎಸ್ ನಡೆಸುತ್ತಿತ್ತು. ಆಗಲೇ ಸಾಕ್ಷಿಗಳ ಹೇಳಿಕೆಗಳನ್ನೂ ದಾಖಲು ಮಾಡಲಾಗಿತ್ತು. ಆರಂಭದಲ್ಲಿ ಮಾಲೇಗಾಂವ್ ಸ್ಫೋಟ
Related Articles
Advertisement
ಸೋನಿಯಾ, ಸಿಂಗ್ ಕ್ಷಮೆ ಕೋರಲಿ: ಸಾಕ್ಷಿಯು ಕೋರ್ಟ್‌ನಲ್ಲಿ ನೀಡಿರುವ ಹೇಳಿಕೆ ವಿಚಾರ ಬಹಿರಂಗವಾಗುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್, “ಯುಪಿಎ ಸರಕಾರದ ಅವಧಿಯಲ್ಲಿ ಕೇಸರಿ ಭಯೋತ್ಪಾದನೆ ಎಂಬ ಸುಳ್ಳು ಆರೋಪ ಹೊರಿಸಿ ನಮ್ಮನ್ನು ಸಿಲುಕಿಸುವಂತೆ ಕಾಂಗ್ರೆಸ್ ಸಂಚು ರೂಪಿಸಿತ್ತು. ಈ ಮೂಲಕ ಕೀಳುಮಟ್ಟದ ರಾಜಕೀಯ ಮಾಡಿತ್ತು. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ವರ್ಚಸ್ಸಿಗೆ ಧಕ್ಕೆ ತಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಪ್ರಿಯಾಂಕಾ ವಾದ್ರಾ, ದಿಗ್ವಿಜಯ್ ಸಿಂಗ್, ಸಲ್ಮಾನ್ ಖುರ್ಷಿದ್ ಕೂಡಲೇ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದ್ದಾರೆ.