Advertisement
ಹಲವು ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದಾದ್ಯಂತ ಇಸ್ಲಾಮ್ ಉಗ್ರವಾದಿ ಗುಂಪುಗಳು, ಪ್ರತಿಭಟನಾಕಾರರು ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿ, ಹಿಂದೂಗಳ ಮನೆಗಳನ್ನು ಲೂಟಿ ಮಾಡಿರುವುದಾಗಿ ವಿವರಿಸಿದೆ.
Related Articles
Advertisement
ಸರ್ಕಾರದ ಪರ ಬೆಂಬಲಿಗರು ಮತ್ತು ಬಾಂಗ್ಲಾದೇಶಿ ಪ್ರತಿಭಟನಾಕಾರರ ನಡುವೆ ನಡೆದ ಹಿಂಸಾಚಾರದಲ್ಲಿ ಅವಾಮಿ ಲೀಗ್ ಪಕ್ಷದ ಸದಸ್ಯ, ರಂಗ್ ಪುರ್ ನಗರ ಕಾರ್ಪೋರೇಶನ್ ನ ಹಿಂದೂ ಕೌನ್ಸಿಲರ್ ಹರ್ಧಾನ್ ರಾಯ್ ಅವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ. ರಾಯ್ ಅವರನ್ನು ಹತ್ಯೆ ಮಾಡಿದ ಬಳಿಕ ಈ ಪ್ರದೇಶದಲ್ಲಿ ಪ್ರಕ್ಷ್ಯುಬ್ಧ ವಾತಾವರಣ ಕಂಡುಬಂದಿರುವುದಾಗಿ ವರದಿ ತಿಳಿಸಿದೆ.
ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ದುಷ್ಕರ್ಮಿಗಳು ಹಿಂಸಾಚಾರದ ವೇಳೆ ಇಸ್ಕಾನ್ ದೇವಾಲಯ ಮತ್ತು ಕಾಳಿ ದೇವಾಲಯಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿರುವುದಾಗಿ ಹೇಳಿದೆ.
ಸ್ವಾತಂತ್ರ್ಯ ಯೋಧರ ಕುಟುಂಬಸ್ಥರಿಗೆ ನೀಡಲಾಗಿರುವ ಶೇ.30ರಷ್ಟು ಮೀಸಲಾತಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಹೋರಾಟ ತೀವ್ರ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ 300ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದರು. ಈ ಘಟನೆ ನಂತರ ಶೇಖ್ ಹಸೀನಾ ಪ್ರಧಾನಿ ಸ್ಥಾನದಿಂದ ಪದಚ್ಯುತಗೊಂಡು ಭಾರತದಲ್ಲಿ ವಾಸ್ತವ್ಯ ಹೂಡಿದ್ದು, ಬ್ರಿಟನ್ ಗೆ ತೆರಳಲು ರಾಜತಾಂತ್ರಿಕ ಅಧಿಕಾರಿಗಳ ಮೂಲಕ ಮಾತುಕತೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.