Advertisement

Bengaluru: ಅರೆಬೆತ್ತಲೆಗೊಳಿಸಿ ಹಲ್ಲೆ; 7 ಮಂದಿ ಆರೋಪಿಗಳ ಸೆರೆ

10:49 AM Jun 09, 2024 | Team Udayavani |

ಬೆಂಗಳೂರು: ಮದ್ಯದ ಅಮಲಿನಲ್ಲಿ ಸಿಗರೇಟ್‌ ವಿಚಾರಕ್ಕೆ ಪರಿಚಿತನ ಮೇಲೆ ಹಲ್ಲೆ ಮಾಡಿದ್ದ 7 ಜನ ಆರೋಪಿಗಳನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಕಾಡುಗೋಡಿ ನಿವಾಸಿಗಳಾದ ಮಂಜುನಾಥ್‌, ಸಂತೋಷ್‌, ಆಕಾಶ್‌, ಅಮರೇಶ್‌, ನವೀನ್‌, ವಿಶಾಲ್‌ ಜೋಷಿ ಮತ್ತು ಸುರೇಂದ್ರನನ್ನು ಬಂಧಿಸಲಾಗಿದೆ. ಆರೋಪಿಗಳು ಬಿಹಾರ ಮೂಲದ ಧನಂಜಯ್‌ ಎಂಬಾತನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದರು.

ಬಿಹಾರ ಮೂಲದ ಧನಂಜಯ್‌ ಮತ್ತು ನೇಪಾಳ ಹಾಗೂ ಸ್ಥಳೀಯ ನಿವಾಸಿಗಳಾದ ಆರೋಪಿಗಳು ಕಾಡುಗೋಡಿಯ ಹೋಟೆಲ್‌ ವೊಂದರಲ್ಲಿ ಬೇರೆ ಬೇರೆ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದರು. ಮೇ 7 ರ ತಡರಾತ್ರಿ ಎಲ್ಲರೂ ಪಾರ್ಟಿ ಮಾಡಿದ್ದಾರೆ. ಧನಂಜಯ್‌ ಕೂಡ ಮದ್ಯ ಸೇವಿಸಿ, ಆರೋಪಿಗಳ ಪೈಕಿ ಪರಿಚಯವಿದ್ದವನಿಂದ ಸಿಗರೇಟ್‌ ಕೇಳಿದ್ದಾನೆ. ಅದೇ ವಿಚಾರಕ್ಕೆ ಧನಂಜಯ್‌ ಹಾಗೂ ಆರೋಪಿಗಳ ನಡುವೆ ಗಲಾಟೆ ಆರಂಭವಾಗಿತ್ತು. ಅದು ವಿಕೋಪಕ್ಕೆ ಹೋದಾಗ ಕೋಪಗೊಂಡ ಧನಂಜಯ್‌ ಕಲ್ಲು ಎತ್ತಿಹಾಕಿ ಆರೋಪಿಗಳ ರೂಮ್‌ ಬಾಗಿಲು ಒಡೆದಿದ್ದಾನೆ. ಅದರಿಂದ ಸಿಟ್ಟಿಗೆದ್ದ ಆರೋಪಿಗಳು ಧನಂಜಜ್‌ ನನ್ನ ಅರಬೆತ್ತಲೆಗೊಳಿಸಿ ರಸ್ತೆಗೆ ಕರೆತಂದು ಕೈಗೆ ಸಿಕ್ಕ ದೊಣ್ಣೆ, ಕಲ್ಲು, ಬೆಲ್ಟ್, ಕ್ರೇಟ್‌ನಿಂದ ಹಲ್ಲೆ ಮಾಡಿದ್ದರು. ಆರೋಪಿಗಳು ಬಡಿದಾಡಿದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವಿಡಿಯೋ ವೈರಲ್‌ ಆಗುತ್ತಿದಂತೆ ಎಚ್ಚೆತ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ‌

ನಂತರ ಘಟನೆಯ ಕುರಿತು ಹೋಟೆಲ್ ಮ್ಯಾನೇಜರ್‌ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next